ಅರಣ್ಯ ಇಲಾಖೆ ಅವ್ಯವಹಾರ ತನಿಖೆ ಚುರುಕು: ಸಚಿವ ಆರ್. ಶಂಕರ್

ಜಗಳೂರು: ತಾಲ್ಲೂಕಿನ ಪ್ರಾದೇಶಿಕ ವಲಯ ಅರಣ್ಯ ಇಲಾಖೆಯ ಕಾಮಗಾರಿಗಳಲ್ಲಿನ ಅವ್ಯವಹಾರದ ಪ್ರಕರಣಗಳು ತನಿಖೆಯ ಹಂತದಲ್ಲಿವೆ ಎಂದು ಅರಣ್ಯ ಸಚಿವರು ಅಧಿವೇಶನದಲ್ಲಿ ಶಾಸಕ ಎಸ್.ವಿ. ರಾಮಚಂದ್ರ ಅವರಿಗೆ ಲಿಖಿತ ಉತ್ತರ ನೀಡಿದ್ದಾರೆ.
2016–17 ಹಾಗೂ 2017–18ನೇ ಸಾಲಿನಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮಗಳು ಹಾಗೂ ವಿವಿಧ ಯೋಜನೆಗಳಲ್ಲಿನ ಕಾಮಗಾರಿಗಳಲ್ಲಿ ಭಾರಿ ಅವ್ಯವಹಾರ ನಡೆದಿರುವ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳು ಮತ್ತು ವಿವಿಧ ಸಂಘಸಂಸ್ಥೆಗಳು ವಲಯ ಅರಣ್ಯಾಧಿಕಾರಿ ವಿರುದ್ಧ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಅವ್ಯವಹಾರದ ದೂರುಗಳ ಬಗ್ಗೆ ತನಿಖೆ ಯಾವ ಹಂತದಲ್ಲಿದೆ ಎಂದು ಶಾಸಕ ಎಸ್.ವಿ, ರಾಮಚಂದ್ರ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆರ್. ಶಂಕರ್ ಲಿಖಿತ ಉತ್ತರ ನೀಡಿದ್ದಾರೆ.
2017 ಮಾರ್ಚ್ನಲ್ಲಿ ಪ್ರಾದೇಶಿಕ ವಲಯ ಅರಣ್ಯಾಧಿಕಾರಿ ವಿರುದ್ಧ ಸಲ್ಲಿಸಲಾಗಿದ್ದ ದೂರು ಅರ್ಜಿಯ ಬಗ್ಗೆ ಬಳ್ಳಾರಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಬೆಂಗಳೂರಿನ ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಅವರಿಂದ ತನಿಖೆ ನಡೆಸಿ ವರದಿ ಪಡೆಯಲಾಗಿದೆ. ತನಿಖೆ ಪ್ರಗತಿಯಲ್ಲಿದೆ ಎಂದು ಸಚಿವರು ಲಿಖಿತ ಉತ್ತರದಲ್ಲಿ ಸ್ಪಷ್ಟಪಡಿಸಿದ್ದಾರೆ ಎಂದು ಶಾಸಕ ಎಸ್.ವಿ. ರಾಮಚಂದ್ರ ಮಾಹಿತಿ ನೀಡಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.