ಸೋಮವಾರ, ಜೂನ್ 27, 2022
24 °C

ಕೆನರಾ ಬ್ಯಾಂಕ್‌ನಿಂದ ಕೊರೊನಾ ಸಂತ್ರಸ್ತರಿಗೆ ಆಹಾರ ವಿತರಣೆ‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಕೆನರಾ ಬ್ಯಾಂಕ್ ದೇಶಕ್ಕಾಗಿ ಹಣಕಾಸು ಸೇವೆಯನ್ನು ಸಲ್ಲಿಸುವುದರ ಜೊತೆಗೆ ಸಾಮಾಜಿಕ ಬದ್ಧತೆಯಿಂದ ಸಮಾಜ ಸೇವೆ ಮಾಡುತ್ತಿರುವುದು ಇತರ ಹಣಕಾಸು ಸಂಸ್ಥೆಗಳಿಗೆ ಮಾದರಿ ಎಂದು ಮೇಯರ್‌ ಎಸ್.ಟಿ‌. ವೀರೇಶ್ ತಿಳಿಸಿದರು.

ಕೆನರಾ ಬ್ಯಾಂಕ್‌ ವತಿಯಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಬುಧವಾರ ಆಯೋಜಿಸಿದ್ದ ಕೊರೊನಾ ಸಂತ್ರಸ್ತರಿಗೆ, ಕೊರೊನಾ ವಾರಿಯರ್‌ಗಳಿಗೆ ಹಾಗೂ ಸಂತ್ರಸ್ತರ ಪರಿಚಾರಕರಿಗೆ ಉಚಿತ ಆಹಾರ ವಿತರಣೆಗೆ ಚಾಲನೆ ನೀಡಿ ಮಾತನಾಡಿದರು.

ಕೆನರಾ ಬ್ಯಾಂಕಿನ ಕ್ಷೇತ್ರೀಯ ಕಾರ್ಯಾಲಯದ ವಿಭಾಗೀಯ ಪ್ರಬಂಧಕ‌ರಾದ ಜಿ.ಆರ್.ನಾಗರತ್ನ, ‘ಕೆ‌ನರಾ ಬ್ಯಾಂಕ್ ತನ್ನ ಸಾಮಾಜಿಕ ಬದ್ಧತೆಯ ಭಾಗವಾಗಿ ಕೊರೊನಾ ಜಾಗೃತಿ ಅಭಿಯಾನ, ಉಚಿತವಾಗಿ ಆಹಾರ ವಿತರಣೆ, ಮಾಸ್ಕ್ ವಿತರಣೆ, ಸಾನಿಟೈಸರ್ ವಿತರಣೆ ಮಾಡಿದೆ. ಜಿಲ್ಲಾ ಆಸ್ಪತ್ರೆಗೆ ಅಗತ್ಯ ಸಲಕರಣೆಗಳನ್ನೂ ಕೊಡುಗೆಯಾಗಿ ನೀಡಿದೆ. ಕೊರೊನಾ ಸಂತ್ರಸ್ತರಿಗೆ ಮತ್ತು ಆಸ್ಪತ್ರೆಗಳಿಗೆ ಹಲವಾರು ಸಾಲ ಯೋಜನೆಗಳನ್ನೂ ಜಾರಿದೆ ತಂದಿದೆ’ ಎಂದು ಹೇಳಿದರು.

ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಶಿವನಗೌಡ ಟಿ ಪಾಟೀಲ್, ಕೆನರಾ ಬ್ಯಾಂಕ್‌ನ ಕೆ‌.ರಾಘವೇಂದ್ರ ನಾಯರಿ, ಎಸ್.ವಿ. ರಾಮಕೃಷ್ಣ ನಾಯ್ಕ್, ಬಿ.ಎ. ಸುರೇಶ್, ಹಂಪಣ್ಣ, ಕೆ.ಶಶಿಕುಮಾರ್, ಕೆ. ವಿಶ್ವನಾಥ ಬಿಲ್ಲವ, ಆರ್. ಆಂಜನೇಯ, ಸಿ.ಪರಶುರಾಮ್ ಮತ್ತಿತರರು ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.