ಭಾನುವಾರ, ಸೆಪ್ಟೆಂಬರ್ 22, 2019
27 °C

ಪೌಷ್ಟಿಕ ಆಹಾರ ಉತ್ಪಾದನಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಭೇಟಿ

Published:
Updated:
Prajavani

ದಾವಣಗೆರೆ: ತಾಲ್ಲೂಕು ಮಹಿಳಾ ಪೂರಕ ಪೌಷ್ಟಿಕ ಆಹಾರ ಉತ್ಪಾದನಾ ಮತ್ತು ತರಬೇತಿ ಸಂಸ್ಥೆಗೆ (ಎಂಎಸ್‌ ಪಿಟಿಸಿ) ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೋಮವಾರ ದಿಢೀರ್‌ ಭೇಟಿ ನೀಡಿ ಅಂಗನವಾಡಿಗಳಿಗೆ ಸರಬರಾಜು ಆಗುವ ಆಹಾರ ಪದಾರ್ಥಗಳನ್ನು ಪರಿಶೀಲಿಸಿದರು.

ಮಕ್ಕಳಿಗೆ ಪೌಷ್ಟಿಕ ಆಹಾರ ತಯಾರಿಸುವ ರವೆ ಕಳಪೆ ಗುಣಮಟ್ಟದ್ದಾಗಿರುವುದನ್ನು ಜಿಲ್ಲಾಧಿಕಾರಿ ಗಮನಿಸಿದರು. ಇನ್ನು ಮುಂದೆ ಈ ರೀತಿಯ ಕಳಪೆ ರವೆ ಸರಬರಾಜು ಮಾಡದಂತೆ ಸಂಸ್ಥೆಯ ಮುಖ್ಯಸ್ಥರಿಗೆ ಎಚ್ಚರಿಕೆ ನೀಡರು. ಇಂತಹ ಆಹಾರ ಸರಬರಾಜು ಮಾಡಿದರೆ ಬಿಲ್ಲು ಪಾವತಿಯನ್ನು ತಡೆಹಿಡಿಯಲಾಗುವುದು ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್, ಸಿಡಿಪಿಒ ವೀಣಾ, ಎಂಎಸ್ ಪಿಟಿಸಿ ಸಿಬ್ಬಂದಿ ಇದ್ದರು.

Post Comments (+)