ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

ಓಮೈಕ್ರಾನ್ ಮಾರ್ಗಸೂಚಿ ಪ್ರಕಟ
Last Updated 4 ಡಿಸೆಂಬರ್ 2021, 3:52 IST
ಅಕ್ಷರ ಗಾತ್ರ

ದಾವಣಗೆರೆ: ಓಮೈಕ್ರಾನ್ ವೈರಸ್ ಸಂಬಂಧ ರಾಜ್ಯ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಿನಿಂದ ಜಾರಿಗೆ ತರುವ ನಿಮಿತ್ತ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಶುಕ್ರವಾರ ನಗರದ ಸಿ.ಜಿ. ಆಸ್ಪತ್ರೆಯಲ್ಲಿ ಸಿದ್ಧತೆಗಳನ್ನು ಪರಿಶೀಲಿಸಿದರು.

ಸಿ.ಜಿ.ಆಸ್ಪತ್ರೆಯಲ್ಲಿ ಬೆಡ್‌ಗಳ ಸಾಮರ್ಥ್ಯ, ವೆಂಟಿಲೇಟರ್‌ಗಳು, ಆಮ್ಲಜನಕ ಹಾಸಿಗೆ, ಆಮ್ಲಜನಕ ಘಟಕ ಹಾಗೂ ಮಾನವ ಸಂಪನ್ಮೂಲದ ಬಗೆಗೆ ಮಾಹಿತಿ ಪಡೆದರು.

‘ಎರಡೂ ಅಲೆಗಳನ್ನು ಯಶಸ್ವಿಯಾಗಿ ನಿಭಾಯಿಸಿರುವ ಅನುಭವ ಬಳಸಿಕೊಂಡು ಓಮೈಕ್ರಾನ್ ತಡೆಗಟ್ಟುವ ಬಗೆಗೆ ಎಲ್ಲಾ ಸಾಧ್ಯತೆಗಳನ್ನೂ ಬಳಸಿಕೊಳ್ಳಲಾಗುತ್ತದೆ. ಮಾಸ್ಕ್ ಧರಿಸುವುದನ್ನು ಮತ್ತಷ್ಟು ಕಡ್ಡಾಯಗೊಳಿಸುತ್ತಿದ್ದು, ಸರ್ಕಾರ ನಿಗದಿಗೊಳಿಸಿರುವಂತೆ ನಗರ ಪ್ರದೇಶಗಳಲ್ಲಿ ₹ 250 ತಾಲ್ಲೂಕು ಮಟ್ಟದಲ್ಲಿ ₹150 ದಂಡ ವಿಧಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಜನಜಂಗುಳಿ ನಿಯಂತ್ರಿಸುವುದು, ಶಾಲಾ ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗುವುದು’ ಎಂದು ಹೇಳಿದರು.

ಸಿ.ಜಿ.ಆಸ್ಪತ್ರೆಯ ಅಧೀಕ್ಷಕ ಡಾ. ಜಯಪ್ರಕಾಶ್‌ ಹಾಗೂ ವೈದ್ಯರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT