ಹರಿಹರ: ನಗರದಲ್ಲಿ ಮಾ.18 ಮತ್ತು 19 ರಂದು 13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹರಿಹರದ ಸಾಹಿತಿ, ನಿವೃತ್ತ ಕನ್ನಡ ಅಧ್ಯಾಪಕ ಪ್ರೊ.ಸಿ.ವಿ.ಪಾಟೀಲ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಬಿ.ವಾಮದೇವಪ್ಪ ತಿಳಿಸಿದರು.

ಮಂಗಳವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮ್ಮೇಳನವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದರು.

ಸಮ್ಮೇಳನದಲ್ಲಿ ನಾಡಿನ ಹಲವಾರು ಸಾಹಿತಿ, ವಿದ್ವಾಂಸರು, ಕನ್ನಡ ಪರ ಸಂಘಟನೆ ಪದಾಧಿಕಾರಿಗಳು, ರೈತರು, ಸರ್ಕಾರಿ ನೌಕರರು, ಸಚಿವ, ಸಂಸದ, ಶಾಸಕರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ ರಾಜಕೀಯ ಮುಖಂಡರನ್ನು ಆಹ್ವಾನಿಸಲಾಗುವುದು ಎಂದರು.

ಸಾಹಿತಿಗಳಾದ ಪ್ರೊ.ಸಿ.ವಿ.ಪಾಟೀಲ್, ಜೆ.ಕಲೀಂಬಾಷಾ, ಡಾ.ಎ.ಬಿ.ರಾಮಚಂದ್ರಪ್ಪ ಅವರ ಹೆಸರನ್ನು ಸಮ್ಮೇಳನದ ಸರ್ವಾಧ್ಯಕ್ಷರ ಆಯ್ಕೆಗೆ ಪ್ರಸ್ತಾಪಿಸಲಾಗಿತ್ತು. ಸಿ.ವಿ. ಪಾಟೀಲ್ ಅವರ ಹೆಸರು ಹೆಚ್ಚಾಗಿ ಕೇಳಿ ಬಂದಿದ್ದರಿಂದ ಅವರನ್ನು ಆಯ್ಕೆ ಮಾಡಲಾಯಿತು ಎಂದು ತಿಳಿಸಿದರು.

ಹರಿಹರದಲ್ಲಿ ಮಾ.18 ಮತ್ತು 19ರಂದು ನಡೆಯುವ ಜಿಲ್ಲಾ ಸಮ್ಮೇಳನದ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ ರಾಘವೇಂದ್ರ ನಾಯರಿ ಹೇಳಿದರು.

ಕಸಾಪ ಜಿಲ್ಲಾ ಘಟಕದ ಮಾಜಿ ಅಧ್ಯಕ್ಷ ಎಸ್.ಎಚ್.ಹೂಗಾರ್, ತಾಲ್ಲೂಕು ಘಟಕದ ಅಧ್ಯಕ್ಷ ಡಿ.ಎಂ. ಮಂಜುನಾಥಯ್ಯ, ಪದಾಧಿಕಾರಿಗಳಾದ ಬಿ.ದಿಳ್ಳೆಪ್ಪ, ರೇವಣಸಿದ್ದಪ್ಪ ಅಂಗಡಿ, ಜಿಗಳಿ ಪ್ರಕಾಶ್, ಎ.ರಿಯಾಜ್ ಅಹ್ಮದ್, ಸತ್ಯಭಾಮ, ಎಂ.ಚಿದಾನಂದ ಕಂಚಿಕೇರಿ, ಬಿ.ಬಿ. ರೇವಣ್ಣನಾಯ್ಕ, ದಂಡಿ ತಿಪ್ಪೇಸ್ವಾಮಿ, ಕೆ.ಟಿ.ಗೀತಾ, ಸದಾನಂದ, ಹಿರಿಯ ಎಚ್.ನಿಜಗುಣ, ಎಚ್.ಕೆ.ಕೊಟ್ರಪ್ಪ, ಜಿ.ಎಚ್.ಮರಿಯೋಜಿರಾವ್, ವಿ.ಬಿ. ಕೊಟ್ರೇಶ್, ಎನ್.ಇ.ಸುರೇಶ್ ಸ್ವಾಮಿ, ಸುಬ್ರಹ್ಮಣ್ಯ ನಾಡಿಗೇರ್, ಫ್ರಾನ್ಸಿಸ್ ಕ್ಸೇವಿಯರ್ ಹಾಗೂ ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಭಾಗಿಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.