ಶುಕ್ರವಾರ, ಅಕ್ಟೋಬರ್ 30, 2020
27 °C
ಕರ್ನಾಟಕ ಜನಶಕ್ತಿ ಮತ್ತು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಜಿಲ್ಲಾ‌ ಸಮಿತಿ ಆಗ್ರಹ

ಬಡ ಜನರನ್ನು ಒಕ್ಕಲೆಬ್ಬಿಸಬೇಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ರಾಜ್ಯದ ಬಡಜನರ ಭೂಮಿ-ವಸತಿ ಸಮಸ್ಯೆಯನ್ನು ಮುಂಬರುವ ಅಧಿವೇಶನದಲ್ಲಿ ಬಗೆಹರಿಸಲು ತೀರ್ಮಾನ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದಾದ್ಯಂತ ನಡೆಯುತ್ತಿರುವ ಜನಜಾಗೃತಿ ಜಾಥಾ ಜಿಲ್ಲೆಗೆ ತಲುಪಿದ್ದು, ಇಲ್ಲಿನ ಮೆಹಬೂಬ್ ನಗರದಲ್ಲಿ ಪ್ರಚಾರಾಂದೋಲನ ಸಭೆ ನಡೆಯಿತು.

ಬಡಜನರಿಗೆ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಭೂಮಿಯಿಂದಾಗಲಿ, ಮನೆಯಿಂದಾಗಲಿ ಒಕ್ಕಲೆಬ್ಬಿಸಬಾರದು ಎಂದು ಕರ್ನಾಟಕ ಜನಶಕ್ತಿ ಮತ್ತು ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಜಿಲ್ಲಾ‌ ಸಮಿತಿಯ ಸದಸ್ಯರು ಆಗ್ರಹಿಸಿದರು.

ಫಾರಂ ನಂ. 50, 53,57,94ಸಿ ಮತ್ತು 94ಸಿಸಿ ಹಾಗೂ ಅರಣ್ಯ ಹಕ್ಕು ಅರ್ಜಿಗಳನ್ನು ನವೆಂಬರ್ ಅಧಿವೇಶನದ ಒಳಗಾಗಿ ಇತ್ಯರ್ಥಗೊಳಿಸಿ ಬಡಜನರಿಗೆ ಹಕ್ಕುಪತ್ರ ನೀಡಬೇಕು ಎಂದು ಆಗ್ರಹಿಸಿದರು.

ಸರ್ಕಾರಿ ಭೂಮಿಯ ಆಡಿಟಿಂಗ್ ನಡೆಸಬೇಕು. ಈಗಿರುವ ಭೂಮಿಯಲ್ಲಿ ಉಳುಮೆಗೆ ಮತ್ತು ನಿವೇಶನಕ್ಕಾಗಿ ಕೂಡಲೇ ವಿತರಣೆ ಮಾಡಬೇಕು. ಭೂ ಸುಧಾರಣೆ ಕಾಯ್ದೆ, ಎಪಿಎಂಸಿ ಕಾಯ್ದೆ, ಕಾರ್ಮಿಕ ವಿರೋಧಿ ಸುಗ್ರೀವಾಜ್ಞೆಗಳನ್ನು ಕೂಡಲೇ ರದ್ದು ಮಾಡಬೇಕು ಎಂದು ಒತ್ತಾಯಿಸಲಾಯಿತು.

ಕಾರ್ಯಕ್ರಮದಲ್ಲಿ ಭೂಮಿ ವಸತಿ ಹೋರಾಟ ಸಮಿತಿಯ ಕುಮಾರ್ ಸಮತಳ, ಕಂದೇಗಾಲ ಶ್ರೀನಿವಾಸ್, ಕರ್ನಾಟಕ ಜನಶಕ್ತಿಯ ಸತೀಶ್ ಅರವಿಂದ್, ಜಬೀನಾ ಖಾನಂ, ಆದೀಲ್ ಖಾನ್, ಖಲೀಲ್, ಅಣ್ಣಪ್ಪ, ಅನ್ವರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು