ದಾವಣಗೆರೆ: ‘ಗ್ರಾಹಕರು ಹೆಚ್ಚಾಗಿ ಜಾಹೀರಾತುಗಳನ್ನು ಅವಲಂಬಿಸಿ ವಸ್ತುಗಳನ್ನು ಖರೀದಿಸಬಾರದು. ಗುಟ್ಟಮಟ್ಟವನ್ನು ಸ್ವತಃ ಪರಿಶೀಲಿಸಿ ವಸ್ತುಗಳನ್ನು ಖರೀದಿಸಬೇಕು. ಜಾಹೀರಾತುಗಳ ಬಗ್ಗೆ ಹೆಚ್ಚು ಎಚ್ಚರದಿಂದ ಇರಬೇಕು. ಇಲ್ಲವಾದಲ್ಲಿ ಮೋಸ ಹೋಗುವ ಸಾಧ್ಯತೆ ಇರುತ್ತದೆ’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ವೆಂಕಟೇಶಬಾಬು ಹೇಳಿದರು.

ನಗರದ ಡೆಂಟಲ್ ಕಾಲೇಜು ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾನೂನು ಮಾಪನಶಾಸ್ತ್ರ ಇಲಾಖೆ, ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರದ ಆಶ್ರಯದಲ್ಲಿ ಸೋಮವಾರ ನಡೆದ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಉತ್ಪಾದಕರು ಕೇವಲ ಲಾಭ ಗಳಿಸುವ ಉದ್ದೇಶದಿಂದ ವಸ್ತುಗಳನ್ನು ಉತ್ಪಾದಿಸಿ ಮಾರಾಟ ಮಾಡುವಂತಹ ಪರಿಸ್ಥಿತಿ ನಿರ್ಮಾಣಗೊಂಡಿದೆ. ಗ್ರಾಹಕರು ವಸ್ತುಗಳ ತೂಕ ಮತ್ತು ಬೆಲೆಗಳನ್ನು ಎಚ್ಚರದಿಂದ ಪರಿಶೀಲಿಸಿ ಖರೀದಿಸಬೇಕು’ ಎಂದು ಸಲಹೆ ನೀಡಿದರು.

‘ಗ್ರಾಹಕರು ತಮಗಾದ ಅನ್ಯಾಯಕ್ಕೆ ಪರಿಹಾರ ಕಂಡುಕೊಳ್ಳಲು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ರಚಿಸಲಾಗಿದೆ. ಇದರ ಸದುಪಯೋಗ ಪಡೆದುಕೊಳ್ಳಬಹುದು’ ಎಂದರು.

‘ಆನ್ಲೈನ್ ಮೂಲಕ ವಸ್ತುಗಳ ಖರೀದಿ ಈಚೆಗೆ ಹೆಚ್ಚಾಗಿದೆ. ಆನ್ಲೈನ್ ವಸ್ತುಗಳ ಗುಣಮಟ್ಟವನ್ನು ಪರಿಶೀಲಿಸಲು ಸಾಧ್ಯವಾಗುವುದಿಲ್ಲ. ಖರೀದಿ ನಂತರವೇ ಅವುಗಳ ಗುಣಮಟ್ಟ ಕಳಪೆ ಎಂಬುದು ತಿಳಿಯುತ್ತದೆ. ತಿನ್ನುವ ವಸ್ತುಗಳು ಕಳಪೆಯಾಗಿದ್ದರೆ, ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತದೆ’ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲ ಮಂಜುನಾಥ್ ಹೇಳಿದರು.

‘ಡಿಜಿಟಲ್ ನ್ಯಾಯದ ಮೂಲಕ ಪರಿಣಾಮಕಾರಿ ಮತ್ತು ತ್ವರಿತ ವಿಲೇವಾರಿ’ ಎಂಬುದು ಈ ವರ್ಷದ ಘೋಷವಾಕ್ಯವಾಗಿದೆ.

ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕ ಕೆ.ಪಿ.ಮಧುಸೂಧನ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಬಿ.ಯು.ಗೀತಾ, ಪ್ರಾಧ್ಯಾಪಕಿ ಯಶೋಧಮ್ಮ ಮಾತನಾಡಿದರು. ಪ್ರಾಂಶುಪಾಲರಾದ ಬಸವರಾಜ್ ತಹಸೀಲ್ದಾರ್, ಪ್ರಾಧ್ಯಾಪಕರು, ವಿಧ್ಯಾರ್ಥಿಗಳು ಉಪಸ್ಥಿತರಿದ್ದರು.

‘ಗ್ರಾಹಕರ ಹಿತ ಕಾಯುವ ಉದ್ದೇಶ’ ‘ಭಾರತದಲ್ಲಿ ವಿಶ್ವ ಗ್ರಾಹಕರ ದಿನಾಚರಣೆಯನ್ನು ಮಾಚ್ 15ರಂದು ಮತ್ತು ರಾಷ್ಟ್ರೀಯ ಗ್ರಾಹಕರ ದಿನಾಚರಣೆಯನ್ನು ಡಿಸೆಂಬರ್ 24 ರಂದು ಆಚರಿಸಿಕೊಂಡು ಬರಲಾಗುತ್ತಿದೆ. ಗ್ರಾಹಕರಲ್ಲಿ ತಾವು ಕೊಳ್ಳುವ ವಸ್ತುಗಳ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ’ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಸಿ.ಎಸ್.ತ್ಯಾಗರಾಜನ್ ತಿಳಿಸಿದರು. ‘ಮೋಸ ಹೋಗಿರುವುದು ತಿಳಿದ ತಕ್ಷಣ ಅಗತ್ಯ ದಾಖಲೆಗಳೊಂದಿಗೆ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವನ್ನು ಸಂಪರ್ಕಿಸಬೇಕು. 3 ತಿಂಗಳಿಂದ ಗರಿಷ್ಠ 1 ವರ್ಷದ ಒಳಗಡೆ ಪರಿಹಾರ ಸಿಗುತ್ತದೆ. ಗ್ರಾಹಕರ ಹಿತ ಕಾಯುವುದಕ್ಕಾಗಿಯೇ ಆಯೋಗವು ಕಾರ್ಯ ನಿರ್ವಹಿಸುತ್ತಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.