ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷೆಗಳಿಗೆ ಸಿಜಿ ಆಸ್ಪತ್ರೆಯಿಂದ ಹೊರಗೆ ಕಳುಹಿಸದಿರಿ: ಜಿಲ್ಲಾಧಿಕಾರಿ

Last Updated 11 ಆಗಸ್ಟ್ 2021, 4:01 IST
ಅಕ್ಷರ ಗಾತ್ರ

ದಾವಣಗೆರೆ: ಸಿ.ಟಿ. ಸ್ಕ್ಯಾನ್‌, ರಕ್ತಪರೀಕ್ಷೆ ಸಹಿತ ಹಲವು ಪರೀಕ್ಷೆಗಳಿಗೆ ಜಿಲ್ಲಾ ಚಿಗಟೇರಿ ಆಸ್ಪತ್ರೆಯಿಂದ ಹೊರಗೆ ಚೀಟಿ ನೀಡದಂತೆ ಜಿಲ್ಲಾ ಸರ್ಜನ್‌ಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ತಿಳಿಸಿದರು.

ಸಿ.ಜಿ. ಆಸ್ಪತ್ರೆಯಲ್ಲಿ ಸಿ.ಟಿ. ಸ್ಕ್ಯಾನ್, ರಕ್ತ ಮಾಪಕಗಳ ಪರಿಶೀಲನೆ ಯಂತ್ರ ಸರಿ ಇಲ್ಲದಿದ್ದರೆ ಕೂಡಲೇ ಸರಿಪಡಿಸಿಕೊಳ್ಳಬೇಕು ಎಂದು ಆಸ್ಪತ್ರೆಯ ಅಧೀಕ್ಷಕರಿಗೆ ತಿಳಿಸಿರುವುದಾಗಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಜಿಲ್ಲೆಯಲ್ಲಿ ಸಕ್ರಿಯ ಕೊರೊನಾ ಪ್ರಕರಣಗಳ ಜಿಲ್ಲೆಯಲ್ಲಿ ಇಳಿದಿದೆ. ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆಯಿಂದ ದಾಖಲಾಗುವ ಸ್ಯಾರಿ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಮತ್ತೆ ಸಾವಿನ ಸಂಖ್ಯೆ ಕಾಣಿಸಿಕೊಂಡಿದೆ. ಉಸಿರಾಟದ ಸಮಸ್ಯೆ ಇರುವವರು ಕೊನೇಕ್ಷಣದಲ್ಲಿ ಆಸ್ಪತ್ರೆಗೆ ಬರುವ ಬದಲು ಬೇಗ ಆಸ್ಪತ್ರೆಗೆ ಬರಬೇಕು. ಕೊರೊನಾ ಪರೀಕ್ಷೆ ನೆಗೆಟಿವ್‌ ಇದೆ ಎಂದು ಉಸಿರಾಟದ ಸಮಸ್ಯೆ ಇರುವವರು ನಿರ್ಲಕ್ಷ್ಯ ಮಾಡಬಾರದು ಎಂದರು.

ಮಂಗಳವಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ 7 ಪ್ರಕರಣ ಪತ್ತೆಯಾಗಿದೆ. 193 ಸಕ್ರಿಯ ಎಂದು ಬುಲೆಟಿನ್‌ನಲ್ಲಿ ಇದ್ದರೂ 82 ಪ್ರಕರಣಗಳಷ್ಟೇ ಸಕ್ರಿಯ ಇವೆ. ಉಳಿದವರು ಗುಣಮುಖರಾಗಿದ್ದರೂ ಬುಲೆಟಿನ್‌ನಲ್ಲಿ ಬರಲು ಬಾಕಿ ಇದೆ ಎಂದು ಹೇಳಿದರು.

ಯಾವುದೇ ಆರಾಧನಾ ಸ್ಥಳಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ ಇದೆ.ಇಷ್ಟಾದರೂ ಕೆಲ ದೇವಸ್ಥಾನಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸದೇ ಇರುವುದು ಕಂಡು ಬಂದಿದ್ದು,ಆ ಬಗ್ಗೆ ಸೂಚನೆ ನೀಡಲಾಗಿದೆ. ರಾಜಕಾರಣಿಗಳ ಸಹಿತ ಯಾರೇ ಆಗಲಿ ಗುಂಪುಗೂಡಿ ಕಾರ್ಯಕ್ರಮ ನಡೆಸಿ ಜಿಲ್ಲಾಡಳಿತಕ್ಕೆ ಮುಜುಗರ ತರುವ ರೀತಿ ಕೆಲಸ ಮಾಡಬಾರದು ಎಂದು ಪ್ರಶ್ನೆಯೊಂದಿಗೆ ಉತ್ತರಿಸಿದರು.

ಜನರು ಕಡ್ಡಾಯವಾಗಿ ಸಾರ್ವಜನಿಕ ಸ್ತಳಗಳಲ್ಲಿ ಮಾಸ್ಕ್ ಧರಿಸಬೇಕಿದೆ.ಈ ಬಗ್ಗೆ ಜನರಿಗೆ ಎಚ್ಚರಿಕೆಯ ಸೂಚನೆಗಳನ್ನು ನೀಡಲಾಗುತ್ತಿದೆ. ಮಾಸ್ಕ್ ಅಭಿಯಾನ ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ. ರಿಷ್ಯಂತ್‌ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ವಿಜಯ ಮಹಾಂತೇಶ್‌ ದಾನಮ್ಮನವರ್‌, ‘ಗ್ರಾಮೀಣ ಭಾಗಗಳಲ್ಲಿ ಕೊರೊನಾ ಕಡಿಮೆ ಆಗಿವೆ. 20 ಗ್ರಾಮಗಳಲ್ಲಿ ತಲಾ 1 ಹಾಗೂ 5 ಗ್ರಾಮಗಳಲ್ಲಿ ತಲಾ 2 ಒಟ್ಟು 30 ಸಕ್ರಿಯ ಪ್ರಕರಣಗಳಿವೆ. 3ನೇ ಅಲೆ ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ವಿವರಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ,ಡಿಎಚ್ಒ ಡಾ.ನಾಗರಾಜ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT