ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸಬೇಡಿ

7
ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಸಲಹೆ

ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಬಳಸಬೇಡಿ

Published:
Updated:

ಚನ್ನಗಿರಿ: ಸರ್ಕಾರ ಯಾವುದೇ ತೀರ್ಮಾನ ಮಾಡಲಿ, ಆದರೆ ಜನರ ಮನಸ್ಸಿನಲ್ಲಿ ವೀರಶೈವ-ಲಿಂಗಾಯತ ಎರಡೂ ಒಂದೇ ಎಂಬ ಭಾವನೆ ಇದೆ. ಧರ್ಮವನ್ನು ರಾಜಕೀಯ ಲಾಭಕ್ಕಾಗಿ ಯಾರೂ ಕೂಡಾ ಬಳಸಬಾರದು. ರಾಜಕೀಯ ಲಾಭಕ್ಕಾಗಿ ಬಳಸಿಕೊಂಡವರಿಗೆ ಜನ ಯಾವ ಸ್ಥಾನ ತೋರಿಸಿದ್ದಾರೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯವಾಗಿದೆ ಎಂದು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.

ತಾಲ್ಲೂಕಿನ ತಾವರೆಕೆರೆ ಶಿಲಾಮಠದಲ್ಲಿ ಶನಿವಾರ ನಡೆದ ಸಿದ್ಧಲಿಂಗ ಶಿವಾಚಾರ್ಯ, ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿಗಳ 47ನೇ ಸ್ಮರಣೋತ್ಸವ ಹಾಗೂ ಧರ್ಮ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಧರ್ಮ ಕಟ್ಟುವುದು ಕಷ್ಟದ ಕೆಲಸ. ಆದರೆ ಯಾವುದೇ ಧರ್ಮವನ್ನು ಕ್ಷಣ ಮಾತ್ರದಲ್ಲಿ ಹಾಳು ಮಾಡಬಹುದು. ವೀರಶೈವ ಧರ್ಮದ ಇತಿಹಾಸ ಮತ್ತು ಪರಂಪರೆ ಅಪೂರ್ವವಾದುದು. ಧರ್ಮ, ಜಾತಿ ಹೆಸರಿನಲ್ಲಿ ವೀರಶೈವ ಧರ್ಮವನ್ನು ಒಡೆಯುವ ಕೆಲಸವನ್ನು ಯಾರೂ ಮಾಡಬಾರದು. ಧರ್ಮವನ್ನು ಇನ್ನಷ್ಟು ಬೆಳೆಸುವ ಜವಾಬ್ದಾರಿ ಎಲ್ಲರ ಮೇಲಿದ್ದು, ಜನರ ಭಾವನೆಗಳಿಗೆ ಬೆಲೆ ಕೊಟ್ಟಾಗ ಮಾತ್ರ ಯಾವುದೇ ಸರ್ಕಾರಕ್ಕೆ ಭವಿಷ್ಯ ಇರುತ್ತದೆ. ಧರ್ಮವನ್ನು ಲಾಭಕ್ಕಾಗಿ ಬಳಸುವುದು ಸಲ್ಲದು’ ಎಂದರು.

‘ಹುಟ್ಟು ಸಾವು ಯಾರನ್ನೂ ಬಿಟ್ಟಿಲ್ಲ. ಜೀವನ ಶಾಶ್ವತವಲ್ಲ. ಗಳಿಸಿದ ಸಿರಿ ಸಂಪತ್ತು, ಅಧಿಕಾರ, ಅಂತಸ್ತು ಯಾವುದೂ ಶಾಶ್ವತವಲ್ಲ. ಉತ್ತಮ ಕಾರ್ಯಗಳನ್ನು ಮಾಡಿದರೆ ಜೀವನ ಸಾರ್ಥಕವಾಗುತ್ತದೆ. ಅರಿತು ಬಾಳಿದರೆ ಬಾಳು ಬಂಗಾರವಾಗುತ್ತದೆ ಎಂದು ಹೇಳಿದರು.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ, ಕಡೂರು ಶಾಸಕ ಬೆಳ್ಳಿ ಪ್ರಕಾಶ್, ತುಮ್ಕೋಸ್ ಅಧ್ಯಕ್ಷ ಎಚ್.ಎಸ್. ಶಿವಕುಮಾರ್ ಇದ್ದರು.

ವಿರೂಪಾಕ್ಷಲಿಂಗ ಶಿವಾಚಾರ್ಯ ಸ್ವಾಮೀಜಿ, ಗುರುಮೂರ್ತಿ ಶಿವಾಚಾರ್ಯ ಸ್ವಾಮೀಜಿ, ರಾಜೋಟೇಶ್ವರ ಶಿವಾಚಾರ್ಯ ಸ್ವಾಮೀಜಿ, ಎಡೆಯೂರು ಮಠದ ರೇಣುಕಾ ಶಿವಾಚಾರ್ಯ ಸ್ವಾಮೀಜಿ, ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ, ಪ್ರಭುಕುಮಾರ್ ಶಿವಾಚಾರ್ಯ ಸ್ವಾಮೀಜಿ, ನಂದೀಶ್ವರ ಶಿವಾಚಾರ್ಯ ಸ್ವಾಮೀಜಿ, ಸಂತೋಷ ದೇವರು, ಗಂಗಾಧರ್ ಶಿವಾಚಾರ್ಯ ಸ್ವಾಮೀಜಿ ಪಾಲ್ಗೊಂಡಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !