ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ, ಶಾಸಕ ಶಾಮನೂರು ಶಿವಶಂಕರಪ್ಪ ಅವರಿಗೆ ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ.

‘ಸೆಪ್ಟೆಂಬರ್ 10ರಂದು ಶರಣ ಬಸವ ವಿಶ್ವವಿದ್ಯಾಲಯದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಕುಲಾಧಿಪತಿ ಶರಣಬಸವಪ್ಪ ಅಪ್ಪಾ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದ್ದಾರೆ.

ಶಾಮನೂರು ಶಿವಶಂಕರಪ್ಪ ಶಿಕ್ಷಣ, ಸಮಾಜ ಸೇವೆಯನ್ನು ಗುರುತಿಸಿ ವಿಶ್ವವಿದ್ಯಾಲಯದ ಪ್ರಥಮ ಮತ್ತು ದ್ವಿತೀಯ ಘಟಿಕೋತ್ಸವದಲ್ಲಿ ಈ ಪದವಿ ನೀಡಲು ಜುಲೈ 30ರಂದು ನಡೆದ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಘಟಿಕೋತ್ಸವದ ಸಮಾರಂಭವು ಯೂಟ್ಯೂಬ್ ಮೂಲಕ ನೇರ ಪ್ರಸಾರವಾಗಲಿದೆ ಎಂದು ವಿಶ್ವವಿದ್ಯಾಲಯದ ಉಪ ಕುಲಪತಿ ನಿರಂಜನ್ ವಿ. ನಿಷ್ಟಿ ತಿಳಿಸಿದ್ದಾರೆ.

ಶಿವಶಂಕರಪ್ಪ ಅವರಿಗೆ 2008ರಲ್ಲಿ ಕುವೆಂಪು ವಿಶ್ವವಿದ್ಯಾಲಯ, 2013ರಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.