ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಕಳಪೆ, ಬಿಡಿ ಬಿತ್ತನೆ ಬೀಜಕ್ಕೆ ಮಾರುಹೋಗಬೇಡಿ

Published 21 ಮೇ 2024, 5:14 IST
Last Updated 21 ಮೇ 2024, 5:14 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಅನಧಿಕೃತ ಕಳಪೆ, ಬಿಡಿ ಬಿತ್ತನೆ ಬೀಜ (ಲೂಸ್‌ ಬಿತ್ತನೆ ಬೀಜ) ಖರೀದಿಸಿ ಮಾರಾಟ ಪ್ರಕರಣಗಳು ಕಂಡುಬಂದಿದ್ದು, ಇವುಗಳನ್ನು ಯಾರೂ ಕೊಂಡುಕೊಳ್ಳಬಾರದು ಎಂದು ಜಂಟಿ ಕೃಷಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಎಚ್ಚರಿಕೆ ನೀಡಿದ್ದಾರೆ.

‘ಜಿಲ್ಲೆಯಲ್ಲಿ ಕೃಷಿ ಇಲಾಖೆಯಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ನಿಗದಿಪಡಿಸಿದ ಸಹಕಾರ ಸಂಘಗಳ ಮೂಲಕ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜಗಳನ್ನು ವಿತರಿಸಲು ಈಗಾಗಲೇ ಕ್ರಮ ವಹಿಸಲಾಗಿದೆ. ಕೃಷಿ ಪರಿಕರ ಮಾರಾಟ ಮಳಿಗೆಗಳಲ್ಲಿ ದೃಢೀಕೃತ ಬಿತ್ತನೆ ಬೀಜಗಳು ಲಭ್ಯವಿದ್ದು, ಕೊರತೆಯಾಗಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

‘ಇತ್ತೀಚಿನ ದಿನಗಳಲ್ಲಿ ಕಳಪೆ ಬಿತ್ತನೆ ಬೀಜದ ಹಾವಳಿ ಹೆಚ್ಚಾಗುತ್ತಿದ್ದು, ಅಲ್ಲಲ್ಲಿ ರೈತರು ಲೂಸ್ ಬಿತ್ತನೆ ಬೀಜಗಳನ್ನು ಖರೀದಿಸುತ್ತಿರುವುದು ಕಂಡುಬಂದಿದೆ. ರೈತರು ಬಿಡಿಬೀಜಗಳನ್ನು ಬಿತ್ತನೆ ಮಾಡಿ ನಷ್ಟ ಅನುಭವಿಸಿದ್ದಲ್ಲಿ ಯಾವುದೇ ದಾಖಲೆಗಳು ಇಲ್ಲದಿರುವುದರಿಂದ ಪರಿಹಾರ ಪಡೆಯಲು ಅರ್ಹರಾಗುವುದಿಲ್ಲ’ ಎಂದು ಹೇಳಿದರು.

ಆದ್ದರಿಂದ ಲೂಸ್ ಬಿತ್ತನೆ ಮಾರಾಟ ಜಾಲಕ್ಕೆ ಸಿಲುಕದೇ ‘ಬೀಜದಂತೆ ಬೆಳೆ–ನೂಲಿನಂತೆ ಸೀರೆ’ ಎಂಬ ಗಾದೆ ಮಾತಿನಂತೆ ಗುಣಮಟ್ಟದ ದೃಢೀಕೃತ ಬಿತ್ತನೆ ಬೀಜಗಳನ್ನು ರೈತ ಸಂಪರ್ಕ ಕೇಂದ್ರಗಳಿಂದ ಅಧಿಕೃತ ಕೃಷಿ ಪರಿಕರ ಮಾರಾಟಗಾರರಿಂದ ಖರೀದಿಸಿ ಬಿತ್ತನೆ ಮಾಡಬೇಕು’ ಎಂದು ಕೋರಿದ್ದಾರೆ. ಅನಧಿಕೃತ ಬಿತ್ತನೆ ಬೀಜ ದಾಸ್ತಾನು ಹಾಗೂ ಮಾರಾಟ ಮಾಡುವವರು ಕಂಡುಬಂದಲ್ಲಿ ತಕ್ಷಣ ಸಹಾಯಕ ಕೃಷಿ ನಿರ್ದೇಶಕರು (ಜಾರಿದಳ) ಮೊ: 8277931106, 8277931207 ಅಥವಾ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT