ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಲಸಿಕೆಯ ಅಪಪ್ರಚಾರಕ್ಕೆ ಕಿವಿಕೊಡದಿರಿ

ಕೊರೊನಾ ವಾರಿಯರ್‌ಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಸಂಸದ ಸಿದ್ದೇಶ್ವರ
Last Updated 6 ಜನವರಿ 2021, 3:26 IST
ಅಕ್ಷರ ಗಾತ್ರ

ದಾವಣಗೆರೆ: ಸರ್ಕಾರ ಈಗ ಸರಬರಾಜು ಮಾಡಲು ಮುಂದಾಗಿರುವ ಕೊರೊನಾ ವ್ಯಾಕ್ಸಿನ್ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಇದಕ್ಕೆ ಯಾರೂ ಕಿವಿಗೊಡದೇ ಎಲ್ಲರೂ ಲಸಿಕೆ ಪಡೆಯಬೇಕು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪ್ರೇರಣಾ ಸಾಂಸ್ಕೃತಿಕ ಸಂಸ್ಥೆ, ಜಿಲ್ಲಾ ಯೋಗ ಒಕ್ಕೂಟ ಹಾಗೂ ಹಿಮಾಲಯನ್ ಅಡ್ವೆಂಚರ್ ಅಕಾಡೆಮಿ ಹಮ್ಮಿಕೊಂಡಿದ್ದ ಕೊರೊನಾ ವಾರಿಯರ್ಸ್‌ಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೊರೊನಾ ನಿರ್ಮೂಲನೆ ಆಗುವವರೆಗೆ ಎಲ್ಲರೂ ಕಡ್ಡಾಯ
ವಾಗಿ ಮಾಸ್ಕ್ ಧರಿಸಬೇಕು. ಅಂತರ ಕಾಪಾಡಿಕೊಳ್ಳಬೇಕು. ಸ್ಯಾನಿಟೈಸರ್‌ನಿಂದ ಕೈಸ್ವಚ್ಛಗೊಳಿಸಿ
ಕೊಳ್ಳುವ ಮೂಲಕ ಮುಂಜಾಗ್ರತೆ ವಹಿಸಬೇಕು. ಜಿಲ್ಲೆಯನ್ನು ಕೊರೊನಾ ಮುಕ್ತಗೊಳಿಸಬೇಕು ಎಂದು ತಿಳಿಸಿದರು.

‘ಕೊರೊನಾ ಮಹಾಮಾರಿ ಹರಡಿದ ಸಂದರ್ಭದಲ್ಲಿ ಸಂಸದರ ಮನೆಯಿಂದಲೇ ಜಿಲ್ಲೆಗೆ ಕೊರೊನಾ ಪ್ರವೇಶ ಮಾಡಿತು ಎಂಬ ಸುದ್ದಿ ಹರಡಿತು. ನಮ್ಮ ಮನೆ ಸದಸ್ಯರಿಗೆ ಕೊರೊನಾ ಬಂದಿದ್ದರೂ ನಾವು ಸರಕ್ಷಿತವಾಗಿದ್ದೆವು. ಆದರೆ, ಕೊರೊನಾ ಆರ್ಭಟ ಆರಂಭವಾದದ್ದು ಜಾಲಿನಗರದಿಂದ’ ಎಂದು ಸ್ಪಷ್ಪನೆ ನೀಡಿದರು.

ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ‘ಮಾತನಾಡುವುದಕ್ಕಿಂತ ಕೆಲಸ ಮಾಡುವುದು ಉತ್ತಮ. ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲಸ ಮಾಡಲು ಅವಕಾಶ ಸಿಕ್ಕಿದೆ. ಕೊರೊನಾ ಅವಧಿಯು ಎಲ್ಲರಿಗೂ ಉತ್ತಮ ಪಾಠವಾಗಿದೆ. ಕೊರೊನಾ ನಿಯಂತ್ರಿಸಲು ಆರೋಗ್ಯ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು, ಆಶಾ ಕಾರ್ಯಕರ್ತೆಯರು ಜಿಲ್ಲಾಡಳಿತದೊಂದಿಗೆ ಉತ್ತಮ ರೀತಿಯಲ್ಲಿ ಸ್ಪಂದಿಸಿದ್ದಾರೆ. ಜನಪ್ರತಿನಿಧಿ
ಗಳು ಕೂಡ ಉತ್ಸಾಹ ತುಂಬಿಸಿದ್ದಾರೆ’ ಎಂದು ನೆನಪಿಸಿಕೊಂಡರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹನುಮಂತರಾಯ, ‘ಮುಂದಿನ ದಿನಗಳಲ್ಲಿ ಎಂತಹ ಕಠಿಣವಾದ ವೈರಸ್‍ಗಳು ಬಂದರೂ ಅವುಗಳನ್ನು ಸಮರ್ಥವಾಗಿ ಎದುರಿಸುವ ಮನೋಸ್ಥೈರ್ಯ ನಮ್ಮೆಲ್ಲರಿಗೆ ಬಂದಿದೆ. ಇನ್ನೂ ಸಾರ್ವಜನಿಕರಲ್ಲಿ ಅರಿವು ಮೂಡಿಲ್ಲ. ಕೊರೊನಾ ನಮ್ಮಿಂದ ಸಂಪೂರ್ಣವಾಗಿ ತೊಲಗುವವರೆಗೆ ಬಹಳ ಎಚ್ಚರಿಕೆಯಿಂದ ನಡೆದುಕೊಳ್ಳ
ಬೇಕು’ ಎಂದು ಸಲಹೆ ನೀಡಿದರು.

ಮೇಯರ್ ಬಿ.ಜಿ. ಅಜಯ ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಪದ್ಮ ಬಸವಂತಪ್ಪ, ಹಿರಿಯ ಪತ್ರಕರ್ತ ಎಚ್.ಬಿ.ಮಂಜುನಾಥ್ ಮಾತನಾಡಿದರು. ಜಿಲ್ಲಾ ಯೋಗ ಪ್ರೇರಣಾ ಸಂಸ್ಥೆ ಅಧ್ಯಕ್ಷೆ ಚೇತನಾ ಶಿವಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಕೆ.ಎಚ್. ವಿಜಯಕುಮಾರ್, ಡಿಎಚ್‍ಒ ಡಾ.ನಾಗರಾಜ್, ಡಾ.ಯು. ಸಿದ್ದೇಶ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ, ಡಿ.ವೆಂಕಟೇಶ್ ಕಾಟೆ, ಮರಿಯೋಜಿರಾವ್, ಶಾಂತಾ ರಾಯ್ಕರ್, ಮಲ್ಲಿಕಾರ್ಜಿನ್ ಅವರೂ ಇದ್ದರು. ಹಿಮಾಲಯನ್ ಅಡ್ವೆಂಚರ್ ಅಕಾಡೆಮಿಯ ಎನ್.ಕೆ.ಕೊಟ್ರೇಶ ಸ್ವಾಗತಿಸಿದರು.ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಾಸುದೇವ ರಾಯ್ಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಶ್ರುತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT