ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಾ. ಬಗಾದಿ ಗೌತಮ್‌ ದಾವಣಗೆರೆ ನೂತನ ಡಿಸಿ

Last Updated 5 ಅಕ್ಟೋಬರ್ 2018, 16:45 IST
ಅಕ್ಷರ ಗಾತ್ರ

ದಾವಣಗೆರೆ: ರಾಯಚೂರು ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್‌ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ ರಾಜ್ಯ ಸರ್ಕಾರ ಶುಕ್ರವಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ದಾವಣಗೆರೆ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಅವರಿಗೆ ಯಾವುದೇ ಹುದ್ದೆಯನ್ನು ತೋರಿಸಿಲ್ಲ. ರಮೇಶ್‌ ಅವರು ಶನಿವಾರ ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ ಅವರಿಗೆ ಅಧಿಕಾರ ಹಸ್ತಾಂತರಿಸುವ ಸಾಧ್ಯತೆ ಇದೆ.

2009ರ ಐಎಎಸ್‌ ಬ್ಯಾಚ್‌ ಆಗಿರುವ ಬಗಾದಿ ಗೌತಮ್‌, 2016 ನವೆಂಬರ್‌ 3ರಿಂದ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅದಕ್ಕೂ ಪೂರ್ವದಲ್ಲಿ ಅವರು ಬೆಳಗಾವಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT