ತುಂಗಭದ್ರಾ ಜಲಾಶಯದಿಂದ  ಕುಡಿಯುವ ನೀರು ಪೂರೈಕೆ ಯೋಜನೆ

7
ಜಗಳೂರು ಸೇರ್ಪಡೆಗೆ ಸಚಿವ ಡಿಕೆಶಿ ಭರವಸೆ: ಶಾಸಕ ರಾಮಚಂದ್ರ

ತುಂಗಭದ್ರಾ ಜಲಾಶಯದಿಂದ  ಕುಡಿಯುವ ನೀರು ಪೂರೈಕೆ ಯೋಜನೆ

Published:
Updated:
ಬೆಂಗಳೂರಿನಲ್ಲಿ ಮಂಗಳವಾರ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ವಿಧಾನಸಭಾ ಸದಸ್ಯರ ಸಭೆ ನಡೆಯಿತು

ಜಗಳೂರು: ತುಂಗಭದ್ರಾ ಜಲಾಶಯದಿಂದ ಜಗಳೂರು ತಾಲ್ಲೂಕಿನ ಹಳ್ಳಿಗಳಿಗೆ ಕುಡಿಯುವ ನೀರು ಪೂರೈಕೆ ಯೋಜನೆ ಜಾರಿಗೆ ಕ್ರಮ ಕೈಗೊಳ್ಳುವುದಾಗಿ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ ಎಂದು ಶಾಸಕ ಎಸ್‌.ವಿ. ರಾಮಚಂದ್ರ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಂಗಳವಾರ ಭದ್ರಾ ಅಚ್ಚುಕಟ್ಟು ವ್ಯಾಪ್ತಿಯ ವಿಧಾನಸಭಾ ಸದಸ್ಯರ ಸಭೆಯಲ್ಲಿ ಸಚಿವರು ಭರವಸೆ ನೀಡಿದರು ಎಂದು ಅವರು ಹೇಳಿದರು.  ತುಂಗಭದ್ರಾ ಜಲಾಶಯದ ಹಿನ್ನೀರಿನಿಂದ ಮೊಳಕಾಲ್ಮುರು, ಪಾವಗಡ ಹಾಗೂ ಚಿತ್ರದುರ್ಗ ತಾಲ್ಲೂಕಿನ ತುರುವನೂರು ಹೋಬಳಿಗೆ ಕುಡಿಯುವ ನೀರು ಪೂರೈಸುವ ಉದ್ದೇಶಿತ ಯೋಜನೆಯ ಪೈಪ್‌ಲೈನ್ ಜಗಳೂರು ವ್ಯಾಪ್ತಿಯಲ್ಲಿ ಹಾದು ಹೋಗಿದೆ. ಯಾವುದೇ ನದಿ ಮೂಲಗಳಿಲ್ಲದ ಹಿಂದುಳಿದ ತಾಲ್ಲೂಕಿನ ಹಳ್ಳಿಗಳಿಗಳಲ್ಲಿ ಶಾಶ್ವತ ನೀರಿನ ಸಮಸ್ಯೆ ಇದೆ. ಈ ಹಿನ್ನೆಲೆಯಲ್ಲಿ ಮಹತ್ವದ ಯೋಜನೆಯಲ್ಲಿ ಕೈಬಿಟ್ಟಿರುವ ತಾಲ್ಲೂಕನ್ನು ಸೇರ್ಪಡೆಗೊಳಿಸಬೇಕು ಎಂದು ಸಚಿವರಿಗೆ ಮನವರಿಕೆ ಮಾಡಲಾಯಿತು.

ಶಾಶ್ವತ ಕುಡಿಯುವ ನೀರು ಪೂರೈಕೆ ಯೋಜನೆಯಡಿ ಜಗಳೂರು ಸೇರ್ಪಡೆ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಿ.ಕೆ. ಶಿವಕುಮಾರ್‌ ಸಭೆಯಲ್ಲಿ ಭರವಸೆ ನೀಡಿದರು ಎಂದು ಶಾಸಕ ರಾಮಚಂದ್ರ ಸ್ಪಷ್ಟಪಡಿಸಿದರು.

ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಈ ಯೋಜನೆ ರೂಪಿಸಲಾಗಿದ್ದು, ಹಿಂದಿನ ಶಾಸಕರ ನಿರ್ಲಕ್ಷ್ಯದ ಕಾರಣ ಮಹತ್ವದ ಯೋಜನೆ ಕೈ ತಪ್ಪಿದೆ ಎಂದು ರಾಮಚಂದ್ರ ಆರೋಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !