ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನಿಸ್‌ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ

Last Updated 29 ನವೆಂಬರ್ 2019, 10:26 IST
ಅಕ್ಷರ ಗಾತ್ರ

ದಾವಣಗೆರೆ: ಕ್ರೀಡಾಪಟುಗಳಲ್ಲಿ ಮತ್ತಷ್ಟು ಕ್ರೀಡಾ ಅಭಿರುಚಿ ಬೆಳೆಸಲಿ, ಕ್ರೀಡಾಭಿಮಾನಿಗಳಲ್ಲಿ ಕ್ರೀಡಾಭಿಮಾನ ಹೆಚ್ಚಲಿ ಎಂದು ಶಾಸಕ ಡಾ.ಶಾಮನೂರು ಶಿವಶಂಕರಪ್ಪ ತಿಳಿಸಿದರು.

ನಗರದ ಸರ್ಕಾರಿ ಬಾಲಕರ ಪ್ರೌಢಶಾಲಾ ಮೈದಾನದಲ್ಲಿ ದಿ.ಪಾರ್ವತಮ್ಮ ಶಾಮನೂರು ಶಿವಶಂಕರಪ್ಪನವರ ಸವಿನೆನಪಿನ ಅಂಗವಾಗಿ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ವತಿಯಿಂದ ನಾಲ್ಕು ದಿನಗಳ ಕಾಲ ‘ಶಾಮನೂರು ಡೈಮಂಡ್ ಹಾಗೂ ಶಿವಗಂಗಾ ಕಪ್–2019’ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಟೆನಿಸ್‌ಬಾಲ್ (ಲೀಗ್ ಕಂ ನಾಟೌಟ್) ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿ ಮಾತನಾಡಿದರು.

ಕ್ರಿಕೆಟ್ ಟೂರ್ನಿ ಜನ ಮೆಚ್ಚಿಗೆ ಪಡೆಯಲು ದಾನಿಗಳ ಸಹಕಾರ ಕಾರಣ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಯಾವದೇ ಕ್ರೀಡೆಗಳಲ್ಲಿ ದಾವಣಗೆರೆಯ ಕ್ರೀಡಾಪಟುಗಳು ಮುಂಚೂಣಿಯಲ್ಲಿದ್ದಾರೆ. ಶಾಮನೂರು ಶಿವಶಂಕರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಅವರುಗಳು ಕ್ರೀಡಾ ಪ್ರೋತ್ಸಾಹ ನೀಡುತ್ತಾ ಬರುತ್ತಿರುವುದು ಕ್ರೀಡೆಗಳಿಗೆ ಮತ್ತಷ್ಟು ಉತ್ತೇಜನ ಸಿಗುವಂತೆ ಮಾಡಿದೆ ಎಂದರು.

ಉದ್ಯಮಿ ಅಥಣಿ ವೀರಣ್ಣ, ವ್ಯಂಗ್ಯ ಚಿತ್ರಕಾರ ಎಚ್.ಬಿ. ಮಂಜುನಾಥ್ ಶುಭ ಹಾರೈಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಉದ್ಯಮಿ ಅಣಬೇರು ರಾಜಣ್ಣ, ಇಂದ್ರಪ್ಪ, ಮಹಾದೇವ್, ಶಿವಗಂಗಾ ಶ್ರೀನಿವಾಸ್, ಶಿವಗಂಗಾ ಬಸವರಾಜ್, ಬಿ.ಎನ್.ಮಲ್ಲೇಶ್, ದೇವರಮನೆ ಮುರುಗೇಶ್, ಎ.ನಾಗರಾಜ್, ವಾಗೀಶ್ ಅವರೂ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT