ಸೋಮವಾರ, ಜನವರಿ 24, 2022
28 °C

ಜಗಳೂರು: ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಅಪಘಾತಕ್ಕೆ ಕಾರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಗಳೂರು ಸಮೀಪದ ಕಾನನಕಟ್ಟೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತಕ್ಕೆ ಚಾಲಕ ನಿದ್ರೆಯ ಮಂಪರಿನಲ್ಲಿ ಇದ್ದುದೇ ಕಾರಣ ಎಂದು ಸ್ಥಳಕ್ಕೆ ಭೇಟಿ ನೀಡಿದ್ದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನ ಖಾಸಗಿ ವಿಶ್ವವಿದ್ಯಾಲಯವೊಂದರಲ್ಲಿ ಹೊರಗುತ್ತಿಗೆ ನೌಕರರಾಗಿ ಕೆಲಸ ಮಾಡುತ್ತಿದ್ದ ಯುವಕರು ಸಂಕ್ರಾಂತಿ ಹಬ್ಬ ಹಾಗೂ ವಾರಾಂತ್ಯ ಕರ್ಫ್ಯೂ ಇದ್ದುದರಿಂದ ಹಂಪಿ ನೋಡಲು ಹೊರಡುತ್ತಿದ್ದರು. ನಿದ್ರೆಯ ಮಂಪರಿನಲ್ಲಿದ್ದ ಚಾಲಕ ರಸ್ತೆಯ ಪಕ್ಕದಲ್ಲಿದ್ದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: 

ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಕರಡಕಲ್ ಗ್ರಾಮದ ಮಲ್ಲನಗೌಡ (22), ಸಂಜೀವ್ (20), ಸಂತೋಷ್ (21). ಜೈಭೀಮ್ (18), ವಿಜಯಪುರ ಜಿಲ್ಲೆಯ ತಾಳಿಕೋಟೆಯ ರಘು (23), ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲ್ಲೂಕಿನ ಸಿದ್ದೇಶ್‌ (20), ವೇದಮೂರ್ತಿ ಹಾಗೂ ಈಚಲಬೊಮ್ಮನಹಳ್ಳಿಯ ಆನಂದ್ (18) ಮೃತರು.

ಜಗಳೂರಿನ ತಾಲ್ಲೂಕು ಆಸ್ಪತ್ರೆಗೆ ಶವಗಳನ್ನು ಸ್ಥಳಾಂತರಿಸಿದ್ದು, ಕುಟುಂಬದವರ ಆಕ್ರಂದನ ಮುಗಿಲುಮುಟ್ಟಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು