ಸಂತೇಬೆನ್ನೂರು: ಇಲ್ಲಿನ ಗ್ರಾಮದೇವತೆ ದುರ್ಗಾಂಬಿಕಾ ದೇವಿ ರಥೋತ್ಸವವು ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆಯಿತು.

ಉತ್ಸವ ಮೂರ್ತಿಗೆ ವಿಶೇಷ ಪೂಜೆ ಸಲ್ಲಿಸಿ ರಥದ ಪೀಠದಲ್ಲಿ ಪ್ರತಿಷ್ಠಾಪಿಸಲಾಯಿತು. ರಥವನ್ನು ಬೃಹತ್ ಹೂವಿನ ಹಾರಗಳು, ಬಾವುಟಗಳು, ಬಲೂನ್ಗಳಿಂದ ಶೃಂಗರಿಸಲಾಗಿತ್ತು. ಪೂಜೆಯ ನಂತರ ರಥವನ್ನು ಗ್ರಾಮದ ಭಕ್ತರು ಕೋಟೆ ರಸ್ತೆಯಲ್ಲಿ ಎಳೆದರು. ಆನಂತರ ಪುಷ್ಕರಿಣಿ ಬಳಿಯ ಗಡಿಕಲ್ಲಿನವರೆಗೂ ರಥವು ಸಾಗಿತು. ರಸ್ತೆಯ ಇಕ್ಕೆಲಗಳಲ್ಲಿ ಭಕ್ತರು ದೇವಿಗೆ ಪೂಜೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಯುವಕರು ರಥದ ಕಳಶಕ್ಕೆ ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಥದ ಚಕ್ರಕ್ಕೆ ತೆಂಗಿನಕಾಯಿ ಒಡೆದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ದೇವಿ ಮರವಣಿಗೆ ನಡೆಯಿತು. ದೇಗುಲದಲ್ಲಿ ಸಾವಿರಾರು ಭಕ್ತರು ಹಣ್ಣು-ಕಾಯಿ ಅರ್ಪಿಸಿ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.