ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

19ರಂದು ಬೃಹತ್‌ ಇ–ಲೋಕ ಅದಾಲತ್‌: ನ್ಯಾ.ಗೀತಾ

Last Updated 5 ಡಿಸೆಂಬರ್ 2020, 15:02 IST
ಅಕ್ಷರ ಗಾತ್ರ

ದಾವಣಗೆರೆ: ಬೃಹತ್‌ ಇ–ಲೋಕ ಅದಾಲತ್‌ ಡಿ. 19ರಂದು ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರಾದ ಗೀತಾ ಕೆ.ಬಿ. ತಿಳಿಸಿದರು.

ಲೋಕ ಅದಾಲತ್ ಮೂಲಕ ಪಕ್ಷಗಾರರು ರಾಜಿಯಾಗಬಲ್ಲ ತಮ್ಮ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಸುಲಭವಾಗಿ ಮತ್ತು ಶೀಘ್ರವಾಗಿ ಯಾವುದೇ ಶುಲ್ಕವಿಲ್ಲದೇ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಪಕ್ಷಗಾರರು ಇ-ಲೋಕ ಅದಾಲತ್‍ನಲ್ಲಿ ವಿಡಿಯೋ ಕಾನ್ಫರೆನ್ಸ್, ವಿಡಿಯೋ ಕಾಲ್ ಮೂಲಕ ಭಾಗವಹಿಸಬಹುದು. ಕೋವಿಡ್ ಟೆಸ್ಟ್ ಮಾಡಿಸಿಕೊಂಡು ನ್ಯಾಯಾಲಯಕ್ಕೂ ಹಾಜರಾಗಿ ತಮ್ಮ ವ್ಯಾಜ್ಯಗಳನ್ನು ಪರಿಹರಿಸಿಕೊಳ್ಳಬಹುದು. ಕಳೆದ ಸೆಪ್ಟೆಂಬರ್‌ 9ರಂದು ನಡೆದ ಬೃಹತ್ ಇ-ಲೋಕ್ ಅದಾಲತ್‍ನಲ್ಲಿ ಜಿಲ್ಲೆಯಲ್ಲಿ 1,492 ಪ್ರಕರಣಗಳು ಇತ್ಯರ್ಥಗೊಂಡು ₹ 4.47 ಕೋಟಿ ಪರಿಹಾರ ಒದಗಿಸಲಾಗಿದೆ ಎಂದು ವಿವರಿಸಿದರು.

ಅಪಘಾತಕ್ಕೆ ಸಂಬಂಧಿಸಿದ ಪರಿಹಾರ, ಪಾಲುವಿಭಾಗ ಕೋರಿ ಸಲ್ಲಿಸುವ ದಾವೆ, ಚೆಕ್‌ ಅಮಾನ್ಯ ಪ್ರಕರಣ, ಬ್ಯಾಂಕ್ ವಸೂಲಾತಿ ಪ್ರಕರಣ, ಉದ್ಯೋಗದಲ್ಲಿ ಪುನರ್ ಸ್ಥಾಪಿಸುವ ಪ್ರಕರಣ, ಕಾರ್ಮಿಕ ವಿವಾದಗಳು ಹಾಗೂ ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಮೈಂಟನೆನ್ಸ್ ಪ್ರಕರಣಗಳು, ಚೆಕ್ ಬೌನ್ಸ್ ಪ್ರಕರಣಗಳು, ಜೀವನಾಂಶದ ಅರ್ಜಿ ಪ್ರಕರಣಗಳು, ಕೌಟುಂಬಿಕ (ವಿಚ್ಚೇದನವನ್ನು ಹೊರತುಪಡಿಸಿ) ಕಲಹಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳ್ನು ಇತ್ಯರ್ಥಪಡಿಸಬಹುದು ಎಂದರು.

ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ, ಭೂಸ್ವಾಧೀನ ಪ್ರಕರಣ, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣ ಹಾಗೂ ಪಿಂಚಣಿ ಪ್ರಕರಣ, ಕಂದಾಯ ಪ್ರಕರಣ, ಸಿವಿಲ್ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ಬಗೆಹರಿಸಲಾಗುವುದು ಎಂದು ತಿಳಿಸಿದರು.

ಇ-ಲೋಕ್ ಅದಾಲತ್‍ನಲ್ಲಿ ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳುವ ಪ್ರಕರಣಗಳಿಗೆ ನ್ಯಾಯಾಲಯಗಳ ಸಂಪೂರ್ಣ ಶುಲ್ಕ ಮರುಪಾವತಿ ಮಾಡಲಾಗುವುದು. ವ್ಯಾಜ್ಯಪೂರ್ವ ಪ್ರಕರಣಗಳಿಗೆ ನ್ಯಾಯಾಲಯಗಳ ಶುಲ್ಕ ಕೊಡಬೇಕಾಗಿಲ್ಲ. ಹಾಗೂ ಇಲ್ಲಿ ಇತ್ಯರ್ಥವಾಗುವ ಪ್ರಕರಣಗಳಿಗೆ ಮೇಲ್ಮನವಿ ಇರುವುದಿಲ್ಲ ಎಂದು ವಿವರಿಸಿದರು.

ಆಸಕ್ತ ಕಕ್ಷಿಗಾರರು ಹೆಚ್ಚಿನ ಮಾಹಿತಿಗಾಗಿ ಇಮೇಲ್ dlsadavangere@gmail.com, ದೂರವಾಣಿ: 08192-296364, 996492792 ಮೂಲಕ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಯನ್ನು ಸಂಪರ್ಕಿಸಬಹುದು ಎಂದರು.

ವಕೀಲರ ಸಂಘದ ಸಹಕಾರ ಎಂದಿಗೂ ಇದೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎನ್.ಟಿ. ಮಂಜುನಾಥ್ ತಿಳಿಸಿದರು.

ಮಾಧ್ಯಮ ಸಹಿತ ಎಲ್ಲರ ಸಹಕಾರದಿಂದ ಬಡವರಿಗೆ ನ್ಯಾಯ ಒದಗಿಸಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಾಬಪ್ಪ ಹೇಳಿದರು.

ಅದಾಲತ್‌ನಲ್ಲಿ ಇತ್ಯರ್ಥ ಆಗುವ ಪ್ರಕರಣ ಸಂಖ್ಯೆಯಲ್ಲಿ ಹೈಕೋರ್ಟ್‌ ಬಿಟ್ಟರೆ ದಾವಣಗೆರೆಯೇ ಮೊದಲ ಸ್ಥಾನದಲ್ಲಿದೆ. ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳಲ್ಲಿ ಕೂಡ ದಾವಣಗೆರ ಪ್ರಥಮ ಸ್ಥಾನದಲ್ಲಿದೆ ಎಂದು ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್.ಅರುಣ್‍ಕುಮಾರ್ ವಿವರ ನೀಡಿದರು.

‘ಕೊರೊನಾ ಪರೀಕ್ಷೆ ಸಮಸ್ಯೆ ಇಲ್ಲ’

ನ್ಯಾಯಾಲಯಕ್ಕೆ ಬರುವ ಕಕ್ಷಿದಾರರು ಅಂದಂದೇ ಕೊರೊನಾ ಪರೀಕ್ಷೆ ಮಾಡಿಸಿಕೊಂಡು ಬರಬೇಕು. ಅದಕ್ಕಾಗಿ ಪಾಲಿಕೆ ರಂಗಮಂದಿರ ಮತ್ತು ಆಯುಷ್‌ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗಿದೆ. ತಡವಾಗುವ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗಿದೆ ಎಂದು ನ್ಯಾಯಾಧೀಶರಾದ ಗೀತಾ ಕೆ.ಬಿ. ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT