ರಾಮನಗರ: ಜಿಲ್ಲೆಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಆಪ್ತ ಇಕ್ಬಾಲ್ ಹುಸೇನ್ಗೆ ಜಾರಿ ನಿರ್ದೇಶನಾಲಯವು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಗುರುವಾರ ದೆಹಲಿಯಲ್ಲಿ ವಿಚಾರಣೆ ನಡೆಯಲಿದೆ.

ಸೆ. 17ರಂದೇ ನೋಟಿಸ್ ಜಾರಿಯಾಗಿದೆ. ಇಕ್ಬಾಲ್ ಹಣಕಾಸಿನ ವ್ಯವಹಾರಗಳ ಕುರಿತು ಇ.ಡಿ. ಮಾಹಿತಿ ಕೇಳಿದೆ ಎಂದು ತಿಳಿದುಬಂದಿದೆ. ಕಲ್ಲು ಗಣಿಗಾರಿಕೆ ಉದ್ಯಮ ಹೊಂದಿರುವ ಇಕ್ಬಾಲ್ 2018ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಲ್ಲಿಸಿದ ಅಫಿಡವಿಟ್ನಲ್ಲಿ ಅವರು 81 ಕೋಟಿ ಆಸ್ತಿ ಘೋಷಣೆ ಮಾಡಿಕೊಂಡಿದ್ದರು.

ಇ.ಡಿ. ನೋಟಿಸ್ ಕುರಿತು ಪ್ರತಿಕ್ರಿಯೆ ನೀಡಿದ ಅವರು ‘ಯಾವ ಕಾರಣಕ್ಕೆ ನೋಟಿಸ್ ಬಂದಿದೆ ಗೊತ್ತಿಲ್ಲ. ಗುರುವಾರ ಬೆಳಗ್ಗೆ ದೆಹಲಿಗೆ ತೆರಳುತ್ತೇನೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.