ಗುರುವಾರ, 23 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬರಪೀಡಿತ ಪಟ್ಟಿಯಿಂದ ಹೊರತರಲು ಪ್ರಯತ್ನ: ಗಾಯತ್ರಿ ಸಿದ್ದೇಶ್ವರ

Published 15 ಏಪ್ರಿಲ್ 2024, 5:16 IST
Last Updated 15 ಏಪ್ರಿಲ್ 2024, 5:16 IST
ಅಕ್ಷರ ಗಾತ್ರ

ದಾವಣಗೆರೆ: ‘ಜಗಳೂರು ವಿಧಾನಸಭಾ ಕ್ಷೇತ್ರ ನಂಜುಂಡಪ್ಪ ವರದಿ ಅನ್ವಯ ಅತೀ ಹಿಂದುಳಿದ ತಾಲ್ಲೂಕು ಎಂದು ಗುರುತಿಸಲ್ಪಟ್ಟಿದ್ದು, ಬರಪೀಡಿತ ಹಣೆಪಟ್ಟಿಯಿಂದ ಹೊರತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ’ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ ಭರವಸೆ ನೀಡಿದರು.

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುಣಬಗಟ್ಟೆ, ಕಮ್ಮತ್ತಹಳ್ಳಿ ಗ್ರಾಮಗಳಲ್ಲಿ ಮತಯಾಚನೆ ಮಾಡಿ ಮಾತನಾಡಿದ ಅವರು, ‘ಬರಪೀಡಿತ ಹಣೆಪಟ್ಟಿಯಿಂದ ಹೊರತರಲು ಪೂರಕವಾಗಿ ಕ್ಷೇತ್ರಕ್ಕೆ ವಿಶೇಷ ಯೋಜನೆಗಳನ್ನು ತರುವ ಉದ್ದೇಶ ನನಗಿದೆ. ಈ ಕುರಿತು ನಾನು ಹೆಚ್ಚಿನ ಕಾಳಜಿ ವಹಿಸುತ್ತೇನೆ’ ಎಂದರು.

ಮಾಜಿ ಶಾಸಕ ಎಚ್.ಪಿ.ರಾಜೇಶ್ ಮಾತನಾಡಿ, ‘ಇದು ಭಾರತದ ದಿಕ್ಸೂಚಿ ಚುನಾವಣೆ. ದೇಶದ ಹಿತದೃಷ್ಟಿಯಿಂದ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಬೇಕಿರುವ ಹೊಣೆಗಾರಿಕೆ ನಮ್ಮ ಮೇಲಿದೆ. ಗಾಯಿತ್ರಿ  ಸಿದ್ದೇಶ್ವರ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಮಾಜಿ ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ, ‘ಸಂಸದ ಜಿ.ಎಂ.ಸಿದ್ದೇಶ್ವರ ಕ್ಷೇತ್ರದ ಎಲ್ಲ ಹಳ್ಳಿಗಳನ್ನು ಸುತ್ತಿದ್ದು, ಜನರಿಗೆ ಹತ್ತಿರವಾಗಿದ್ದಾರೆ. ಇಷ್ಟು ಬಾರಿ ಅವರ ಕುಟುಂಬ ಗೆಲ್ಲುವುದಕ್ಕೆ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳೇ ಶ್ರೀರಕ್ಷೆ ಎಂದರು.

ಜೆಡಿಎಸ್ ಮುಖಂಡ ಕಲ್ಲೇರುದ್ರೇಶ್, ಬಳ್ಳಾರಿ ಸಂಸದ ಅರಸೀಕೆರೆ ದೇವೇಂದ್ರಪ್ಪ, ಮುಖಂಡರಾದ ಜಿ.ಎಸ್.ಅನಿತ್ ಕುಮಾರ್, ಅಣ್ಣಪ್ಪ, ಪಲ್ಲಾಗಟ್ಟೆ ಮಹೇಶ್, ಕೆಂಚಮನಹಳ್ಳಿ ಮಂಜಣ್ಣ, ಬಿದಕೆರೆ ರವಿ ಕುಮಾರ್, ಅರಸೀಕೆರೆ ದ್ಯಾಮೇಗೌಡ್ರು, ಇಂದಿರಾ ರಾಮಚಂದ್ರಪ್ಪ, ಸೊಕ್ಕೆ ನಾಗರಾಜ್, ಮಂಜುನಾಥ್, ಫಣಿಯಾಪುರ ಲಿಂಗರಾಜ್, ಜಂಬನಗೌಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT