ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರೊಬ್ಬ ತಾಯಿ ಹೃದಯಿ. ಅವರೊಳಗೆ ಮಹಾತ್ಮ ಗಾಂಧೀಜಿ ಮತ್ತು ಭಗತ್ ಸಿಂಗ್ ಕೂಡ ಇದ್ದಾರೆ ಎಂದು ಕೆಪಿಸಿಸಿ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕ ಸುಧೀರ್ ಕುಮಾರ್ ಮುರೊಳ್ಳಿ ಹೇಳಿದರು. ‘ನೋಟು ಅಮಾನ್ಯ ಮಾಡಿದಾಗ ರಾಹುಲ್ ಗಾಂಧಿ ಅವರು ಸ್ವತಃ ಬ್ಯಾಂಕ್ ಎದುರು ಸರತಿ ಸಾಲಿನಲ್ಲಿ ನಿಂತಿದ್ದರು. ಜನಸಾಮಾನ್ಯರು ಅನುಭವಿಸುವ ನೋವು ಅರ್ಥ ಮಾಡಿಕೊಳ್ಳುವ ಪ್ರಯತ್ನ ಮಾಡಿದರು. ಕನ್ಯಾಕುಮಾರಿಯಿಂದ ಕಾಶ್ಮೀರವರೆಗೆ ಯಾತ್ರೆ ಮಾಡಿ ಜನರ ಸಂಕಷ್ಟವನ್ನು ಅರಿತಿದ್ದಾರೆ. ಅವರ ವಿರುದ್ಧ ನಡೆಯುತ್ತಿರುವ ಅಪಪ್ರಚಾರ ತಡೆಯುವ ಕಾರ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಮಾಡಬೇಕಿದೆ’ ಎಂದರು.