ದಾವಣಗೆರೆ: ಜಮೀನಿನಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ನಲ್ಲಿ (ಟಿ.ಸಿ) ಪ್ರವಹಿಸುತ್ತಿದ್ದ ವಿದ್ಯುತ್ ಸ್ಪರ್ಶಿಸಿ ರೈತ ದಂಪತಿ ಮೃತಪಟ್ಟ ಘಟನೆ ತಾಲ್ಲೂಕಿನ ಕಾಟೆಹಳ್ಳಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ.

ಗ್ರಾಮದ ನಿವಾಸಿಗಳಾದ ನಾಗರಾಜ್ (35) ಹಾಗೂ ಲತಾ (30) ಮೃತರು. ದಂಪತಿಗೆ ಇಬ್ಬರು ಪುತ್ರಿಯರಿದ್ದಾರೆ.

ಬುಧವಾರ ರಾತ್ರಿ ಧಾರಾಕಾರವಾಗಿ ಮಳೆ ಸುರಿದಿದ್ದರಿಂದ ಇವರ ಒಂದೂವರೆ ಎಕರೆ ಜಮೀನಿನಲ್ಲಿ ನೀರು ನಿಂತಿತ್ತು. ತಾವು ಬೆಳೆದಿದ್ದ ಟೊಮೊಟೊ ಹಾಗೂ ಇನ್ನಿತರ ತರಕಾರಿ ತರಲು ಬೆಳಿಗ್ಗೆ ಜಮೀನಿಗೆ ತೆರಳಿದಾಗ ಟಿ.ಸಿ ಬಳಿಯ ತಂತಿಯನ್ನು ಸ್ಪರ್ಶಿಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಗ್ರಾಮಕ್ಕೆ ಭೇಟಿ ನೀಡಿ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಮೃತರ ಮಕ್ಕಳಿಗೆ ಸೂಕ್ತ ಪರಿಹಾರ ನೀಡುವಂತೆ ಬೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.