ಗುರುವಾರ , ಜುಲೈ 29, 2021
21 °C

ವಿದ್ಯುತ್ ತಂತಿ ತುಳಿದು ರೈತ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಜಮೀನಿನಲ್ಲಿ ವಿದ್ಯುತ್ ತಂತಿ ತುಳಿದು ತಾಲ್ಲೂಕಿನ ಆಲೂರು ಗ್ರಾಮದ ರೈತ ಶಿವರಾಜ್ (50) ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ.

ಶಿವರಾಜ್ ಅವರು ಎಂದಿನಂತೆ ಜಮೀನಿಗೆ ತೆರಳಿದ್ದ ವೇಳೆ ಹಸಿ ಹುಲ್ಲಿನೊಳಗೆ ವಿದ್ಯುತ್ ತಂತಿ ಬಿದ್ದಿತ್ತು. ಇದನ್ನು ಗಮನಿಸದ ಅವರು ತುಳಿದಿದ್ದು, ವಿದ್ಯುತ್ ಶಾಕ್ ಆಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪಿಎಸ್ಐ ಮತ್ತು ತಂಡ ಭೇಟಿ ನೀಡಿ ಪರಿಶೀಲಿಸಿತು. ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.