ದಾವಣಗೆರೆ: ಸ್ವಾವಲಂಬಿ, ಸುಭದ್ರ ಆರ್ಥಿಕತೆಗೆ ಪರ್ಯಾಯ ಚಿಂತನೆ ಅನಿವಾರ್ಯ. ಪೆಟ್ರೋಲ್, ಡೀಸೆಲ್ ಮೇಲಿನ ಅವಲಂಬನೆ ಕಡಿಮೆಗೊಳಿಸಿ ಭಾರತವನ್ನು ಸಶಕ್ತಗೊಳಿಸಲು ಎಲೆಕ್ಟ್ರಿಕ್ ವಾಹನ ಬಳಕೆಯೇ ಪರಿಹಾರ ಮಾರ್ಗ ಎಂದು ದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ರಮೇಶ್ ಸಾಲಿಯಾನ ಅಭಿಪ್ರಾಯಪಟ್ಟರು.

ದಾವಣಗೆರೆ ವಿಶ್ವವಿದ್ಯಾನಿಲಯ ಎಂಬಿಎ ವಿಭಾಗದ ವತಿಯಿಂದ ‘ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳು: ಸುಸ್ಥಿರತೆಯತ್ತ ಚಾಲನೆ’ ಕುರಿತು ಗುರುವಾರ ಏರ್ಪಡಿಸಿದ್ದ ವಿಚಾರಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.

‘ಸಾಂಪ್ರದಾಯಿಕ ಇಂಧನಗಳಿಗೆ ಭಾರತವು ವಿದೇಶಿ ರಾಷ್ಟ್ರಗಳನ್ನು ಅವಲಂಬಿಸಿದೆ. ಇದು ಆರ್ಥಿಕತೆಯ ಒತ್ತಡವನ್ನು ಸೃಷ್ಟಿಸಿದೆ. ದೇಶದಲ್ಲಿ ಉತ್ಪಾದಿತ ವಿದ್ಯುತ್ ಶಕ್ತಿ ಬಳಸಿಕೊಂಡರೆ ಇಂಧನದ ಮೇಲಿನ ಆಮದು ವೆಚ್ಚ ಕಡಿಮೆ ಮಾಡಲು ಸಾಧ್ಯವಿದೆ. ಇಂಧನ ಭದ್ರತೆ, ವಾಯುಮಾಲಿನ್ಯ, ಆರ್ಥಿಕ ಸಮಸ್ಯೆ ನಿವಾರಣೆ, ತಾಪಮಾನದಂತಹ ಸಮಸ್ಯೆಗಳನ್ನು ನಿವಾರಿಸಿ, ಸುಸ್ಥಿರ ಅಭಿವೃದ್ಧಿಯತ್ತ ಹೆಜ್ಜೆಹಾಕಲು ಸಾಧ್ಯವಾಗುತ್ತದೆ’ ಎಂದು ಪ್ರತಿಪಾದಿಸಿದರು.

‘ದೇಶದಲ್ಲಿ ವಾಯುಮಾಲಿನ್ಯ ಗಂಭೀರ ಸಮಸ್ಯೆಯಾಗಿದೆ. ಪೆಟ್ರೋಲ್, ಡೀಸೆಲ್ ವಾಹನಗಳಿಂದ ಹೊರಸೂಸುವ ಹಾನಿಕಾರಕ ಅನಿಲಗಳು ಪರಿಸರ ಮತ್ತು ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದ ವಾಯುಮಾಲಿನ್ಯವನ್ನು ಗಣನೀಯವಾಗಿ ಕಡಿಮೆ ಮಾಡಬಹುದು. ಆರ್ಥಿಕತೆಯ ಜೊತೆಗೆ ಆರೋಗ್ಯ ಕೂಡ ಸುಧಾರಣೆ ಕಾಣಲಿದೆ’ ಎಂದರು.

‘ಭವಿಷ್ಯದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಪಾತ್ರ ನಿರ್ಣಾಯಕ. ಎಲೆಕ್ಟ್ರಿಕ್ ವಾಹನಗಳ ಬಿಡಿಭಾಗಗಳ ಉತ್ಪಾದನೆಗೆ ಬೇಡಿಕೆ ಸೃಷ್ಟಿಯಾಗಿದೆ. ವಿದ್ಯಾರ್ಥಿಗಳು ಆ ನಿಟ್ಟಿನಲ್ಲಿ ಚಿಂತನೆ ಮಾಡಬೇಕು. ಹೆದ್ದಾರಿ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಚಾರ್ಜಿಂಗ್ ಕೇಂದ್ರಗಳು ಸಜ್ಜಾದರೆ ಎಲೆಕ್ಟ್ರಿಕ್ ವಾಹನಗಳಿಗೆ ಹೆಚ್ಚಿನ ಬೇಡಿಕೆ ಬರಲಿದೆ’ ಎಂದು ಕುಲಪತಿ ಪ್ರೊ.ಬಿ.ಡಿ. ಕುಂಬಾರ ಹೇಳಿದರು.

‘ಎಲೆಕ್ಟ್ರಿಕ್ ವಾಹನಗಳ ನಿರ್ವಹಣಾ ವೆಚ್ಚವು ಸಾಂಪ್ರದಾಯಿಕ ವಾಹನಗಳಿಗಿಂತ ಕಡಿಮೆ. ವಿದ್ಯುತ್ ಬೆಲೆ ಇತರ ಇಂಧನಗಳಿಗಿಂತ ಅಗ್ಗವಾಗಿದ್ದು, ಗ್ರಾಹಕರಿಗೆ ಆರ್ಥಿಕವಾಗಿ ಲಾಭದಾಯಿಕ’ ಎಂದು ಮಹಾಂತ ಮೋಟಾರ್ಸ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ ಅಭಿಪ್ರಾಯ ವ್ಯಕ್ತಪಡಿಸಿದರು.

‘ಎಲೆಕ್ಟ್ರಿಕ್ ವಾಹನಗಳ ಆರಂಭಿಕ ಹೂಡಿಕೆ ವೆಚ್ಚ ಸಾಂಪ್ರದಾಯಿಕ ವಾಹನಗಳಿಗಿಂತ ಹೆಚ್ಚು. ಸುಧಾರಿತ ಬ್ಯಾಟರಿ ತಂತ್ರಜ್ಞಾನದೊಂದಿಗೆ ವೆಚ್ಚ ಕಡಿಮೆಯಾಗುವ ನಿರೀಕ್ಷೆಯಿದೆ. ಬ್ಯಾಟರಿ ತಯಾರಿಕೆಗೆ ಅಗತ್ಯವಿರುವ ಲಿಥಿಯಂ, ಕೋಬಾಲ್ಟ್, ನಿಕೆಲ್ನಂತಹ ಖನಿಜಗಳ ಲಭ್ಯತೆ ಭಾರತದಲ್ಲಿ ಸೀಮಿತವಾಗಿದೆ’ ಎಂದು ಹೇಳಿದರು.

ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ.ಆರ್.ಶಶಿಧರ, ಪ್ರೊ.ಜೆ.ಕೆ. ರಾಜು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.