ಸೋಮವಾರ, ಫೆಬ್ರವರಿ 17, 2020
31 °C

ಹೊಸಹಳ್ಳಿಯಲ್ಲಿ ಕಾಡಾನೆ ದಾಳಿ: ಬಾಳೆ, ಅಡಿಕೆ ನಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ ತಾಲ್ಲೂಕು ಹೊಸಹಳ್ಳಿ ಗ್ರಾಮದಲ್ಲಿ ಸೋಮವಾರ ರಾತ್ರಿ ಕಾಡಾನೆ ದಾಳಿ ನಡೆಸಿ ಅಡಿಕೆ ಹಾಗೂ ಬಾಳೆ ಗಿಡಿಗಳನ್ನು ಮುರಿದು ಹಾಕಿರುವುದು.

ಚನ್ನಗಿರಿ: ತಾಲ್ಲೂಕಿನ ಕುಕ್ಕವಾಡೇಶ್ವರಿ ಅರಣ್ಯ ಪ್ರದೇಶದ ವ್ಯಾಪ್ತಿಯ ಹೊಸಹಳ್ಳಿಯದಲ್ಲಿ ಸೋಮವಾರ ರಾತ್ರಿ ಕಾಡಾನೆಯೊಂದು ತೋಟಕ್ಕೆ ನುಗ್ಗಿ, ಅಡಿಕೆ ಹಾಗೂ ಬಾಳೆ ಗಿಡಗಳನ್ನು ನಾಶಪಡಿಸಿದೆ.

ರೈತರಾದ ಕುಬೇರಪ್ಪ ಎಂಬುವವರ ತೋಟಕ್ಕೆ ನುಗ್ಗಿದ ಆನೆ, 50 ಬಾಳೆ ಗಿಡ ಹಾಗೂ 15 ಅಡಿಕೆ ಗಿಡಗಳನ್ನು ಮುರಿದು ಹಾಕಿದೆ. ₹50 ಸಾವಿರ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಹದಿನೈದು ದಿನಗಳ ಹಿಂದೆ ಈ ಭಾಗದ ಕೆ. ಗಾಣದಕಟ್ಟೆ, ಹನುಮಂತನಗರ ಗ್ರಾಮಗಳಲ್ಲಿ ರಾತ್ರಿ ವೇಳೆ ಎರಡು ಆನೆಗಳು ನುಗ್ಗಿ, ನೂರಾರು ಅಡಿಕೆ ಹಾಗೂ ಬಾಳೆ ಗಿಡಗಳನ್ನು ತುಳಿದು ಹಾಕಿದ್ದವು.

ಸ್ಥಳಕ್ಕೆ ಭೇಟಿ ನೀಡಿದ ವಲಯ ಅರಣ್ಯಾಧಿಕಾರಿ ದಿನೇಶ್, ‘ರಾತ್ರಿ ವೇಳೆ ಮಾತ್ರ ಕಾಡಾನೆಗಳು ಈ ಭಾಗದ ತೋಟಗಳಿಗೆ ನುಗ್ಗಿ ಹಾನಿ ಮಾಡುತ್ತಿವೆ. ಕುಕ್ಕುವಾಡೇಶ್ವರಿ ಅರಣ್ಯ ಪ್ರದೇಶದಲ್ಲಿ ಸಾಕಷ್ಟು ಕಾಡಾನೆಗಳು ವಾಸ ಮಾಡುತ್ತಿವೆ. ಈ ಭಾಗದಲ್ಲಿ ಕಾಡಾನೆಗಳಿಗೆ ಸಮೃದ್ಧವಾದ ಆಹಾರ ಸಿಗುವುದರಿಂದ ರಾತ್ರಿಯ ವೇಳೆ ಬರುತ್ತಿವೆ. ಈ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿನ ಗ್ರಾಮಗಳ ಗಡಿಗಳಲ್ಲಿ ಆನೆ ಕಂದಕಗಳನ್ನು ನಿರ್ಮಿಸುವಂತೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನುದಾನ ಬಿಡುಗಡೆಯಾದ ಕೂಡಲೇ ಕಂದಕ ನಿರ್ಮಿಸಲಾಗುವುದು’ ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು