ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಗಿರಿ | ಆನೆ ದಾಳಿ: ಬೆಳೆಗಳಿಗೆ ಹಾನಿ

Published 24 ಮೇ 2024, 5:49 IST
Last Updated 24 ಮೇ 2024, 5:49 IST
ಅಕ್ಷರ ಗಾತ್ರ

ಚನ್ನಗಿರಿ: ತಾಲ್ಲೂಕಿನ ಉಬ್ರಾಣಿ ಹೋಬಳಿಯ ಬಂಡಿಗುಡ್ಡ ಪ್ರದೇಶದಲ್ಲಿ ಗುರುವಾರ ಬೆಳಗಿನ ಜಾವ ಕಾಡಾನೆಯೊಂದು ತೋಟಗಳಿಗೆ ನುಗ್ಗಿದ್ದು, ಬೆಳೆ ಹಾನಿಯಾಗಿ‌ದೆ.

ಬಂಡಿಗುಡ್ಡ ಗ್ರಾಮದ ಅಡಿಕೆ ತೋಟಗಳಿಗೆ ನುಗ್ಗಿದ ಕಾಡಾನೆ ರೈತರೊಬ್ಬರ ಅಡಿಕೆ ಹಾಗೂ ಬಾಳೆ ಗಿಡಗಳಿಗೆ ಹಾನಿ ಮಾಡಿದೆ.

ಆನೆ ದಾಳಿಯಿಂದ ಈ ಭಾಗದ ರೈತರು ಆತಂಕಗೊಂಡಿದ್ದಾರೆ. ಹಾನಿಗೊಳಗಾದ ರೈತನಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

‘ಬಂಡಿಗುಡ್ಡ ಪ್ರದೇಶದಲ್ಲಿ ಕಾಡಾನೆ ತೋಟಕ್ಕೆ ನುಗ್ಗಿ ಹಾನಿ ಮಾಡಿರುವ ಮಾಹಿತಿ ಸಿಕ್ಕಿದೆ. ತಾಲ್ಲೂಕು ಆನೆ ಕಾರಿಡಾರ್‌ ವ್ಯಾಪ್ತಿಗೆ ಒಳಪಡುವ ಕಾರಣ ಈ ಭಾಗದಲ್ಲಿ ಕಾಡಾನೆಗಳು ತೋಟಗಳಿಗೆ ನುಗ್ಗುವುದು ಸಾಮಾನ್ಯ. ರೈತರು ಆತಂಕ ಪಡುವ ಅಗತ್ಯ ಇಲ್ಲ. ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ವಲಯ ಅರಣ್ಯಾಧಿಕಾರಿ ಮಧುಸೂದನ್‌ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT