ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕತ್ತಿ ಹೇಳಿಕೆಯಿಂದ ಸರ್ಕಾರಕ್ಕೆ ಮುಜುಗರ: ರೇಣುಕಾಚಾರ್ಯ

Last Updated 14 ಮೇ 2021, 7:56 IST
ಅಕ್ಷರ ಗಾತ್ರ

ದಾವಣಗೆರೆ: ಸಚಿವ ಉಮೇಶ್‌ ಕತ್ತಿ ಅವರ ವ್ಯಂಗ್ಯ ಮತ್ತು ಉಡಾಫೆಯ ಮಾತುಗಳಿಂದ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಉಂಟಾಗಿದೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಎಂಟು ಬಾರಿ ಶಾಸಕರಾಗಿರುವ ಕತ್ತಿ, ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜ್ಯದ ಜನರ ಸೇವೆಯನ್ನು ಗಂಭೀರವಾಗಿ ಮಾಡಬೇಕು ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಕೊರೊನಾ ಸಮಯದಲ್ಲಿ ಅಕ್ಕಿ ಪೂರೈಸುವಲ್ಲಿ ಕತ್ತಿ ಎಡವಿದ್ದಾರೆ. ಮೊದಲಿನಂತೆ ಜನರಿಗೆ 5 ಕೆಜಿ ಅಕ್ಕಿ ಪೂರೈಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇನೆ. ಅದಕ್ಕೆ ಮುಖ್ಯಮಂತ್ರಿ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.

ಚನ್ನಪಟ್ಟಣದಲ್ಲಿ ಸೋತರೂ ಮಂತ್ರಿ ಮಾಡಿದ್ದಕ್ಕಾಗಿ ಮುಖ್ಯಮಂತ್ರಿಯನ್ನು ಬದಲಾಯಿಸಲು ದೆಹಲಿಯಲ್ಲಿ ಲಾಬಿ ಮಾಡುತ್ತಿದ್ದಾರೆ. ಲಾಬಿ ಬಿಟ್ಟು ಚನ್ನಪಟ್ಟಣದ ಜನರ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸಬೇಕು ಎಂದು ಸಿ.ಪಿ. ಯೋಗೇಶ್ವರ್‌ಗೆ ಸಲಹೆ ನೀಡಿದರು.

‘ಚನ್ನಪಟ್ಟಣದ ಜನರಿಗೆ ಕುಡಿಯಲು ನೀರಿಲ್ಲ, ವೆಂಟಿಲೇಟರ್, ಆಮ್ಲಜನಕ ಇಲ್ಲ. ಜನರ ಹಿತ ಕಾಪಾಡುವುದು ಬಿಟ್ಟು ರಾಜಕಾರಣ ಮಾಡುವುದು ಸರಿಯಲ್ಲ. ಯಾರೋ ಒಬ್ಬರು ಲಾಬಿ ಮಾಡಿದ ತಕ್ಷಣ ಮುಖ್ಯಮಂತ್ರಿ ಬದಲಾಗಲ್ಲ. ಯಡಿಯೂರಪ್ಪ ಅವರೇ ಪೂರ್ಣಾವಧಿ ಮುಖ್ಯಮಂತ್ರಿ ಆಗಿರುತ್ತಾರೆ. ಕೊರೊನಾ ಸಂಕಷ್ಟ ಇರುವ ಕಾರಣಕ್ಕೆ ರಾಜಕಾರಣ ಬೇಡ ಎಂದು ಸುಮ್ಮನಿದ್ದೇನೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT