ಸೋಮವಾರ, 29 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳೆಯರ ಸಬಲೀಕರಣಕ್ಕೆ ಒತ್ತು: ಡಾ.ಪ್ರಭಾ

Published 16 ಏಪ್ರಿಲ್ 2024, 5:25 IST
Last Updated 16 ಏಪ್ರಿಲ್ 2024, 5:25 IST
ಅಕ್ಷರ ಗಾತ್ರ

ದಾವಣಗೆರೆ: ಉದ್ಯೋಗಸ್ಥ ಮಹಿಳೆಯರು ಸೇರಿದಂತೆ ಜಿಲ್ಲೆಯಲ್ಲಿ ಮಹಿಳಾ ಸಬಲೀಕರಣಕ್ಕೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭರವಸೆ ನೀಡಿದರು.

ದಾವಣಗೆರೆ ನಗರದ ಕೈಗಾರಿಕಾ ಪ್ರದೇಶದಲ್ಲಿನ ವಿವಿಧ ಗಾರ್ಮೇಂಟ್ಸ್‌ನಲ್ಲಿ ಕೆಲಸ ಮಾಡುವ ಉದ್ಯೋಗಸ್ಥ ಮಹಿಳೆಯರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಹಿಳೆಯರ ಸಬಲೀಕರಣ ಅವಶ್ಯಕತೆ ಇರುವುದನ್ನು ಮನಗಂಡು ಕಾಂಗ್ರೆಸ್ ಸರ್ಕಾರ ಮಹಿಳೆಗೆ ಪ್ರತಿ ತಿಂಗಳು ₹2 ಸಾವಿರ ನೀಡುತ್ತಿದ್ದು, ‘ಶಕ್ತಿ’ ಯೋಜನೆ ಮೂಲಕ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅನುಕೂಲ ಕಲ್ಪಿಸಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮಹಿಳಾ ಸಂಘಗಳನ್ನು ಆರಂಭಿಸುವ ಮೂಲಕ ಉಳಿತಾಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ’ ಎಂದರು.

‘ಮಹಿಳೆಯರಿಗೆ ಸ್ವಾವಲಂಬಿ ಜೀವನ ನಡೆಸಲು ಅನುಕೂಲವಾಗುವಂತೆ ಗಾರ್ಮೆಂಟ್ಸ್‌ ಮತ್ತು ಕರಕುಶಲ ಕೇಂದ್ರಗಳನ್ನು ಸ್ಥಾಪಿಸುವ ಚಿಂತನೆ ನಡೆಸಲಾಗಿದೆ. ಜೊತೆಗೆ ಮಹಿಳಾ ಉದ್ಯಮಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುವುದು’ ಎಂದರು.

ಭೂಮಿಕಾ ಡಿ.ಸಿ. ಶ್ರೀನಿವಾಸ್, ಸತ್ಯನಾರಾಯಣ, ಕೋಮಲಜೈನ್, ಹಾಲೇಶ್ ಗೌಡ, ಶಾಕೀರ ಗಾರ್ಮೆಂಟ್ಸ್‌ನ ಆರೀಫ್, ಎಸ್.ಬಿ.ಎಲ್ ಗಾರ್ಮೆಂಟ್ಸ್‌ನ ವಿಶ್ವನಾಥ, ಶ್ರೀನಿವಾಸ್, ಮಯೂರ ಗಾರ್ಮೆಂಟ್ಸ್‌ನ ಕಿಶನ್, ಮಹಾಂತ ಮೋಟಾರ್ಸ್‍ನ ಪ್ರಕಾಶ್, ಪ್ರಶಾಂತ್, ಸಾಯಿ ಕ್ರಿಯೇಷನ್‍ನ ಮುರುಗೇಶಪ್ಪ ಮತ್ತಿತರರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT