ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಬೇಡಿಕೆ ಈಡೇರಿಕೆಗೆ ನೌಕರರ ಒತ್ತಾಯ

ಹೋರಾಟಕ್ಕೆ ಜಿಲ್ಲಾ ಕಾಂಗ್ರೆಸ್‍, ಫಾರ್ಮಾಸಿಸ್ಟ್‌ ಬೆಂಬಲ
Last Updated 2 ಅಕ್ಟೋಬರ್ 2020, 13:31 IST
ಅಕ್ಷರ ಗಾತ್ರ

ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿ ಎನ್‍ಎಚ್‍ಎಂ ಆರೋಗ್ಯ ಇಲಾಖೆಯ ನೌಕರರು ನಡೆಸುತ್ತಿರುವ ಪ್ರತಿಭಟನೆ ಶುಕ್ರವಾರವೂ ಮುಂದುವರಿಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಸೇರಿ ವಿವಿಧ ಸಂಘಟನೆಗಳು ನೌಕರರ ಹೋರಾಟಕ್ಕೆ ಬೆಂಬಲ ಸೂಚಿಸಿದವು.

ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಹಲವು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ಸರ್ಕಾರ ಗಮನಹರಿಸಿಲ್ಲ. ಅಧಿಕಾರಿಗಳ ಮೂಲಕ ಮುಷ್ಕರ ನಿರತ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳುವ ಬಗ್ಗೆ ನಿರ್ದೇಶನ ನೀಡಿದ್ದು ವಿಷಾದನೀಯ. ಈಗ ಸರ್ಕಾರ ಎಚ್.ಆರ್. ಪಾಲಿಸಿಯನ್ನು ಅಂತಿಮಗೊಳಿಸಿ ವರದಿಯನ್ನು ನೀಡಲು ಮತ್ತೆ ಮೂರು ತಿಂಗಳು ಸಮಯ ಕೇಳಿದ್ದು ಸರಿಯಲ್ಲ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷ ಎನ್‌.ಸಿ. ಹಾಲಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಉಪಾಧ್ಯಕ್ಷ ಡಾ. ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಡಾ. ಅಂದಾನಗೌಡ ಪಾಟೀಲ್, ಅಂಬರೀಷ್, ಮಂಜುನಾಥ್ ಹಾಗೂ ಸದಸ್ಯರು ಸಾಮಾಜಿಕ ಕಾರ್ಯಕರ್ತ ಸಂತೋಷ್ ಕುಮಾರ್, ಸಿಬ್ಬಂದಿ ಇದ್ದರು.

ಕಾಂಗ್ರೆಸ್‌ ಬೆಂಬಲ:

ನೌಕರರ ಪ್ರತಿಭಟನೆಗೆ ಜಿಲ್ಲಾ ಕಾಂಗ್ರೆಸ್ ಸಮಿತಿ ಬೆಂಬಲ ಸೂಚಿಸಿದೆ. ಸಮಿತಿಜಿಲ್ಲಾಧ್ಯಕ್ಷ ಎಚ್.ಬಿ. ಮಂಜಪ್ಪ ನೇತೃತ್ವದಲ್ಲಿ ಪ್ರತಿಭಟನಾ ಸ್ಥಳಕ್ಕೆ ತೆರಳಿದ ಕಾಂಗ್ರೆಸ್‌ ಕಾರ್ಯಕರ್ತರು ಬೆಂಬಲ ಘೋಷಿಸಿದರು.

ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿ ಮೂಲಕ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಎಚ್.ಬಿ. ಮಂಜಪ್ಪ ಹೇಳಿದರು.

ಪಾಲಿಕೆ ವಿರೋಧ ಪಕ್ಷದ ನಾಯಕ ಎ.ನಾಗರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್ ಕೆ.ಶೆಟ್ಟಿ, ಜಿಲ್ಲಾ ಪಂಚಾಯಿತಿ ಸದಸ್ಯ ಕೆ.ಎಸ್. ಬಸವಂತಪ್ಪ, ಮುಖಂಡರಾದ ಅನಿತಾಬಾಯಿ ಮಾಲತೇಶ್, ಪ್ರಕಾಶ್ ಪಾಟೀಲ್, ಹದಡಿ ಹಾಲಪ್ಪ, ಚಮನ್ ಸಾಬ್ ಇದ್ದರು.

ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘ ಬೆಂಬಲ:

ಎನ್.ಎಚ್.ಎಂ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರ ಹೋರಾಟಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ಫಾರ್ಮಸಿ ಅಧಿಕಾರಿಗಳ ಸಂಘದ ಬೆಂಬಲ ಇದೆ ಎಂದು ಸಂಘದ ಜಿಲ್ಲಾಧ್ಯಕ್ಷ ಡಾ.ಶಿವಾನಂದ ದಳವಾಯಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT