ದಾವಣಗೆರೆ: ‘ಪಾಶ್ಚಿಮಾತ್ಯ ಸಂಸ್ಕೃತಿಯೇ ಖುಷಿ ಎಂದುಕೊಂಡಿದ್ದೇವೆ. ಆದರೆ, ನಿಜವಾದ ಖುಷಿ ನಮ್ಮ ಭಾರತೀಯ ಸಂಸ್ಕೃತಿಯಲ್ಲಿದೆ’ ಎಂದು ಬಿ.ಎಸ್.ಚನ್ನಬಸಪ್ಪ ಕಾಲೇಜಿನ ಅಧ್ಯಕ್ಷ ಬಿ.ಸಿ.ಶಿವಕುಮಾರ್ ಅಭಿಪ್ರಾಯಪಟ್ಟರು.
ನಗರದ ಎಸ್.ಎಸ್.ಬಡಾವಣೆಯಲ್ಲಿರುವ ಬಿ.ಎಸ್.ಚನ್ನಬಸಪ್ಪ ಕಾಲೇಜಿನಲ್ಲಿ ನಡೆದ ‘ನಮ್ಮ ಪರಂಪರೆ-2023’ ಎಥ್ನಿಕ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪ್ರಾಂಶುಪಾಲ ಗುರು ಎಂ.ಸಿ ಮಾತನಾಡಿ, ‘ಭಾರತೀಯ ಸಂಸ್ಕೃತಿಯಲ್ಲಿ ವೈವಿಧ್ಯತೆ ಇದೆ. ಇದರಲ್ಲಿ ನಾವು ಯಶಸ್ಸು ಸಾಧಿಸಬಹುದು. ಇಂತಹ ಸಂಸ್ಕೃತಿಯನ್ನು ನಾವು ಒಂದೇ ದಿನಕ್ಕೆ ಸೀಮಿತಗೊಳಿಸಬಾರದು’ ಎಂದರು.
ರಂಗು ರಂಗಿನ ಉಡುಗೆಗಳನ್ನು ತೊಟ್ಟು ಬಂದಿದ್ದ ಕಾಲೇಜಿನ ವಿದ್ಯಾರ್ಥಿಗಳು ಕಾಲೇಜು ಆವರಣದಲ್ಲಿ ಬಿಸಿಲನ್ನು ಲೆಕ್ಕಿಸದೆ ಕನ್ನಡ ಹಾಡುಗಳಿಗೆ ಹೆಜ್ಜೆ ಹಾಕಿದರು.