ನಗರದ ಪ್ರವಾಸಿ ಮಂದಿರ ರಸ್ತೆ, ನಿಟುವಳ್ಳಿ, ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗ, ಕೆ.ಆರ್. ಮಾರುಕಟ್ಟೆ, ಚಾಮರಾಜಪೇಟೆ, ಪಿ.ಬಿ. ರಸ್ತೆ, ಗಡಿಯಾರ ಕಂಬ, ಚೌಕಿ ಪೇಟೆ ಸಹಿತ ಎಲ್ಲ ಮಾರುಕಟ್ಟೆಗಳಲ್ಲಿ ಭಾರಿ ಸಂಖ್ಯೆಯಲ್ಲಿ ಜನರು ನೆರೆದಿದ್ದರು. ಅದರಲ್ಲೂ ಮಹಿಳೆಯರ ಪ್ರಮಾಣವೇ ಅಧಿಕವಾಗಿತ್ತು. ಹೂವುಗಳ ಬೆಲೆ ತುಸು ಕಡಿಮೆಯಾಗಿದ್ದರೂ ಹಣ್ಣುಗಳ ಬೆಲೆ ಹೆಚ್ಚಾಗಿತ್ತು.