ದಾವಣಗೆರೆ: ಜಿಲ್ಲೆಯಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ತಡೆಯಲು ಕಲಂ 144 ಅನ್ವಯ ಪ್ರತಿ ರಾತ್ರಿ 9ರಿಂದ ಬೆಳಿಗ್ಗೆ 5ರ ವರೆಗೆ ನಿಷೇಧಾಜ್ಞೆ ಹೇರಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಾದ್ಯಂತ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಅಗತ್ಯ ಚಟುವಟಿಕೆ ಹೊರತುಪಡಿಸಿ, ಇತರ ಚಟುವಟಿಕೆ, ವ್ಯಕ್ತಿಗಳ ಹಾಗೂ ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇದಲ್ಲದೇ ಜುಲೈ 5ರಿಂದ ಆಗಸ್ಟ್ 2ರವರೆಗೆ ನಾಲ್ಕು ಭಾನುವಾರ ದಿನಪೂರ್ತಿ ಲಾಕ್ಡೌನ್ ಇರಲಿದೆ. ಈ ಸಂದರ್ಭದಲ್ಲಿ ಅಗತ್ಯ ಸರಕು ಸರಂಜಾಮುಗಳ ಸಾಗಾಣಿಕೆಗೆ ನಿರ್ಬಂಧವಿರುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆಯ ಕಲಂ 188 ಮತ್ತು 270 ಹಾಗೂ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51ರಿಂದ 60 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.