ಮಂಗಳವಾರ, ಮೇ 18, 2021
30 °C

ಸ್ಫೋಟಕ ವಸ್ತು ಸಾಗಣೆ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ಪಟ್ಟಣದ ಕರಗ ಕ್ರಾಸ್‌ನಲ್ಲಿ ಶನಿವಾರ ಸ್ಕಾರ್ಪಿಯೊ ವಾಹನದಲ್ಲಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂಬಂದ ಆಂಧ್ರಪ್ರದೇಶದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ವಿನಯ್‌ ಹಾಗೂ ಗಂಗರಾಜ್‌ ಬಂಧಿತ ಆರೋಪಿಗಳು.

ಆರೋಪಿಗಳು ಚಿತ್ರದುರ್ಗ ಕಡೆಯಿಂದ ಚನ್ನಗಿರಿ ಮಾರ್ಗವಾಗಿ ಸ್ಫೋಟಕ ವಸ್ತುಗಳನ್ನು ಸಾಗಿಸುತ್ತಿದ್ದ ಸಂಬಂಧ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಕರಗ ಕ್ರಾಸ್‌ ಬಳಿ ತಪಾಸಣೆ ನಡೆಸಿದರು. 

ಆರೋಪಿಗಳಿಂದ 8800 ಜಿಲೆಟಿನ್‌ ಕಡ್ಡಿಗಳು, 3700 ಎಲೆಕ್ಟ್ರಾನಿಕ್‌ ಡೆಕೊನೆಟರ್‌, ಕೃತ್ಯಕ್ಕೆ ಬಳಸಿದ ಸ್ಕಾರ್ಪಿಯೊ ಸೇರಿ ₹ 6 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್‌ಪಿ ಪ್ರಶಾಂತ್ ಮುನ್ನೋಳಿ ಮಾರ್ಗದರ್ಶನದಲ್ಲಿ ಸಿಪಿಐ ಆರ್‌.ಆರ್‌. ಪಾಟೀಲ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು