ದಾವಣಗೆರೆ: ಸೆಮಿಸ್ಟರ್ ಪರೀಕ್ಷೆಗಳಲ್ಲಿ ಫೇಲಾಗಿದ್ದಕ್ಕೆ ಮನನೊಂದ ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಇಲ್ಲಿನ ಕುಂದವಾಡ ಕೆರೆಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ದಾವಣಗೆರೆ ಎಸ್.ಎಸ್. ಲೇಔಟ್ ನಿವಾಸಿ ರಂಜಿತ್ ಭಟ್ (24) ಮೃತಪಟ್ಟ ವಿದ್ಯಾರ್ಥಿ.

‘ಜಿಎಂಐಟಿಯಲ್ಲಿ ಫೈನಲ್ ಸೆಮಿಸ್ಟರ್ ನಲ್ಲಿ ವ್ಯಾಸಂಗ ಮಾಡುತ್ತಿದ್ದ ಇವರು, ಈ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳಲ್ಲಿ ಹಲವು ವಿಷಯಗಳಲ್ಲಿ ಫೇಲಾಗಿದ್ದರು. ಚೆನ್ನಾಗಿ ಓದಲಿಲ್ಲ ಎಂಬ ಕಾರಣಕ್ಕೆ ಮನನೊಂದು ಮಂಗಳವಾರ ಬೆಳಿಗ್ಗೆ ಕೆರೆಯಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಪೊಲೀಸರು ತಿಳಿಸಿದರು.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಹೊರತೆಗೆದರು. ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.