ಬುಧವಾರ, ಅಕ್ಟೋಬರ್ 21, 2020
21 °C

ಕೌಟುಂಬಿಕ ಕಲಹ: ಇಬ್ಬರು ಮಕ್ಕಳೊಂದಿಗೆ ಶಿಕ್ಷಕಿ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಕೌಟುಂಬಿಕ ಕಲಹದ ಕಾರಣದಿಂದ ಶಿಕ್ಷಕಿಯೊಬ್ಬರು ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಲ್ಲಿನ ಜಯನಗರದ ನಿವಾಸಿ ಶ್ರೀದೇವಿ (38), ಮಕ್ಕಳಾದ ಹಂಸಿಕಾ (12) ಹಾಗೂ ನೂತನಾ (9) ಮೃತಪಟ್ಟವರು. 

ಪ್ರೌಢಶಾಲೆಯೊಂದರ ಶಿಕ್ಷಕಿಯಾಗಿರುವ ಇವರು ಮನೆ ಕಟ್ಟುವ ವಿಚಾರದಲ್ಲಿ ಪತಿಯೊಂದಿಗೆ ಜಗಳ ಮಾಡಿಕೊಂಡಿರುವುದೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ. ‌ನಗರದ ಹೊರವಲಯದ ಎಚ್. ಕಲ್ಪನಹಳ್ಳಿಯ ಕಾಲುವೆ ಬಳಿಗೆ ಸ್ಕೂಟಿಯಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗಿದ್ದಾರೆ. ಬಳಿಕ ವೇಲ್‌ನಿಂದ ಮಕ್ಕಳನ್ನು ಸೊಂಟಕ್ಕೆ ಕಟ್ಟಿಕೊಂಡು ಕಾಲುವೆಗೆ ಹಾರಿದ್ದಾರೆ.

ದಾವಣಗೆರೆ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವ ತೆಗೆದು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.