ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

7
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರ ಪ್ರತಿಭಟನೆ

ರೈತರ ಮೇಲಿನ ದೌರ್ಜನ್ಯಕ್ಕೆ ಖಂಡನೆ

Published:
Updated:
Deccan Herald

ದಾವಣಗೆರೆ: ದೆಹಲಿಯಲ್ಲಿ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಪೊಲೀಸರು ದಾಳಿ ನಡೆಸಿರುವ ಕ್ರಮ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಕಾರ್ಯಕರ್ತರು ನಗರದ ಜಯದೇವ ವೃತ್ತದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದು ನಾಲ್ಕು ವರ್ಷಗಳು ಕಳೆದರೂ ರೈತರ ಪರ ಕಾರ್ಯಕ್ರಮಗಳನ್ನು ಜಾರಿಗೆ ತಂದಿಲ್ಲ. ಫಸಲ್‌ ಬಿಮಾ ಯೋಜನೆ ಕೂಡ ವಿಮಾ ಕಂಪನಿಗಳಿಗೆ ಅನುಕೂಲವಾಗುವಂತಿದೆ. ಹೀಗಾಗಿ, ರೈತರ ಶ್ರೇಯೋಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವಂತೆ ಒತ್ತಾಯಿಸಿ ರೈತರು ದೆಹಲಿ ಚಲೋ ಹಮ್ಮಿಕೊಂಡಿದ್ದರು. ಆದರೆ, ರಾಜಧಾನಿ ಪ್ರವೇಶಿಸುವ ವೇಳೆಯೇ ಪೊಲೀಸರು ರೈತರ ಮೇಲೆ ಲಾಠಿ ಬೀಸಿದರು. ಜಲ ಪಿರಂಗಿ ಪ್ರಯೋಗಿಸಿ ರೈತರನ್ನು ಹಿಮ್ಮೆಟಿಸಿದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರೈತ ಸಂಘದ ಜಿಲ್ಲಾ ಅಧ್ಯಕ್ಷ ಮಲ್ಲಶೆಟ್ಟಿಹಳ್ಳಿ ಚನ್ನಬಸಪ್ಪ, ಕಲೀಂ ಉಲ್ಲಾ ಕರೇಕಟ್ಟೆ, ಎಂ. ರಂಗಸ್ವಾಮಿ ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಜಿಲ್ಲಾಧಿಕಾರಿಗೆ ಮನವಿ: ದೆಹಲಿಯಲ್ಲಿ ರೈತರ ಮೇಲೆ ನಡೆದ ದಾಳಿ ಖಂಡಿಸಿ ಜಿಲ್ಲಾಧಿಕಾರಿ ಡಿ.ಎಸ್‌. ರಮೇಶ್‌ ಅವರಿಗೆ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡರು ಮನವಿ ಸಲ್ಲಿಸಿದರು.

ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹಸಿರು ಸೇನೆ ರಾಜ್ಯ ಅಧ್ಯಕ್ಷ ಎಚ್‌.ಎಂ. ಮಹೇಶ್ವರ ಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲಾಪುರ ದೇವರಾಜ್‌, ಮುಖಂಡರಾದ ಕೆ.ಎನ್‌. ಸಿದ್ದೇಶ್, ಮರುಳಸಿದ್ದಪ್ಪ, ನಾಗತಿಕಟ್ಟೆ ಜಯಾನಾಯ್ಕ, ಮಲ್ಲೇನಹಳ್ಳಿ ಭೀಮಣ್ಣ, ಹುಣಸೇಕಟ್ಟೆ ಕುಬೇರಪ್ಪ, ಹರೀಶ್‌ ಜಮಾಪುರ, ಚಟ್ನಹಳ್ಳಿ ಬಸವರಾಜ, ಹು. ಚಂದ್ರಪ್ಪ, ಐಗೂರು ಶಿವಮೂರ್ತಪ್ಪ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !