ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ನಿಂದ ಮೃತಪಟ್ಟ ರೈತರ ₹ 2.19 ಕೋಟಿ ಸಾಲ ಮನ್ನಾಕ್ಕೆ ಪ್ರಸ್ತಾವ

ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ
Last Updated 14 ಜುಲೈ 2021, 6:38 IST
ಅಕ್ಷರ ಗಾತ್ರ

ದಾವಣಗೆರೆ: ಜಿಲ್ಲೆಯಲ್ಲಿ ಸಹಕಾರ ಬ್ಯಾಂಕ್‌ಗಳಿಂದ ಸಾಲ ಪಡೆದಿರುವ 420 ರೈತರು ಕೋವಿಡ್‌ನಿಂದ ಮೃತಪಟ್ಟಿದ್ದು, ಅವರ ಸಾಲ ಮನ್ನಾ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ.

‘ಜಿಲ್ಲೆಯಲ್ಲಿ ಮೃತಪಟ್ಟಿರುವ ರೈತರ ಪಾಸಿಟಿವ್ ವರದಿಗಳನ್ನು ಸಂಗ್ರಹಿಸಲಾಗಿದೆ. ರೈತರು ಮಾಡಿರುವ ಸಾಲ ₹ 2.19 ಕೋಟಿಯನ್ನು ಮನ್ನಾ ಮಾಡಲು ಸರ್ಕಾರಕ್ಕೆ ಮಾಹಿತಿ ಸಲ್ಲಿಸಿದ್ದೇವೆ’ ಎಂದುದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಜೆ.ಎಸ್. ವೇಣುಗೋಪಾಲ ರೆಡ್ಡಿ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಎನ್‌.ಎ.ಮುರುಗೇಶ್ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ಜಿಲ್ಲೆಯಲ್ಲಿ 694 ಸಹಕಾರ ಸಂಘಗಳು ನಮ್ಮ ಬ್ಯಾಂಕಿನ ಸದಸ್ಯತ್ವ ಹೊಂದಿದ್ದು, ಈ ಪೈಕಿ 192 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ಜಿಲ್ಲೆಯ ರೈತ ಸದಸ್ಯರಿಗೆ ಸಾಲ ನೀಡಿದೆ. 2020–21ನೇ ಸಾಲಿನಲ್ಲಿ ಬ್ಯಾಂಕ್ ₹1.23 ಕೋಟಿ ಲಾಭ ಗಳಿಸಿದೆ. 90 ಸಾವಿರ ರೈತ ಸದಸ್ಯರಿಗೆ ಶೂನ್ಯ ಬಡ್ಡಿ ದರಲ್ಲಿ ₹360 ಕೋಟಿ ಹಾಗೂ ಶೇ 3ರ ಬಡ್ಡಿ ದರದಲ್ಲಿ 195 ರೈತರಿಗೆ ₹15 ಕೋಟಿ ಮಧ್ಯಮಾವಧಿ ಸಾಲ ನೀಡಲಾಗಿದೆ’ ಎಂದು ವೇಣುಗೋಪಾಲ ರೆಡ್ಡಿ ಮಾಹಿತಿ ನೀಡಿದರು.

‘ಜಿಲ್ಲೆಯ ಗ್ರಾಹಕರಿಗೆ ತ್ವರಿತ ಸೇವೆ ಒದಗಿಸುದ ನಿಟ್ಟಿನಲ್ಲಿ ಮೊಬೈಲ್ ಬ್ಯಾಂಕಿಂಗ್ ಸೇವೆ, ಕೆ.ಸಿ.ಸಿ ಸಾಲ ಪಡೆದ ರೈತರಿಗೆ ರೂಪೇ ಕಾರ್ಡ್ ಹಾಗೂ ವೈಯಕ್ತಿಕ ಅಪಘಾತ ವಿಮೆ ಯೋಜನೆಯನ್ನು ಅಳವಡಿಸಲಾಗಿದೆ. ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯನ್ನು ಬ್ಯಾಂಕ್‌ನಲ್ಲಿ ಅನುಷ್ಠಾನಗೊಳಿಸಿದ್ದು, 2019–20ನೇ ಸಾಲಿನ ಲೆಕ್ಕ ಪರಿಶೋಧನೆಯಲ್ಲಿ ಬ್ಯಾಂಕ್ ’ಎ’ ಶ್ರೇಣಿ ಪಡೆದಿದೆ’ ಎಂದು ಹೇಳಿದರು.

ಎನ್‌.ಎ. ಮುರುಗೇಶ್ ಮಾತನಾಡಿ, ‘ಸಹಕಾರ ಇಲಾಖೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಿದ್ದು, ಸಚಿವರಾಗಿರುವ ಅಮಿತ್ ಶಾ ಅವರು ಈ ಕ್ಷೇತ್ರವನ್ನು ಇನ್ನಷ್ಟು ಬಲಗೊಳಿಸಬೇಕು. ದೇಶದ ಆರ್ಥಿಕ ಪ್ರಗತಿಗೆ ಶೇ 18ರಷ್ಟು ಸಹಕಾರ ಕ್ಷೇತ್ರದ ಪಾಲು ಇದ್ದು, ರಾಜ್ಯದಲ್ಲಿ ಕೆಳ ಹಾಗೂ ಮಧ್ಯಮ ವರ್ಗದವರ ಅಭಿವೃದ್ಧಿಗೆ ಸಹಕಾರ ಕ್ಷೇತ್ರ ನಿರಂತರವಾಗಿ ಸ್ಪಂದಿಸುತ್ತಿದೆ’ ಎಂದು ಹೇಳಿದರು.

‘ಆಯುಷ್ಮಾನ್ ನಿಧಿಗೆ ₹10 ಲಕ್ಷ ಪಾವತಿಸಿದ್ದು, ಜಿಲ್ಲೆಯಲ್ಲಿ 32 ರೈತರು ವಿವಿಧ ಕಾರಣಗಳಿಂದ ಮೃತಪಟ್ಟಿದ್ದು, ಆ ರೈತರ ಕುಟುಂಬಗಳಿಗೆ ತಲಾ ₹ 1 ಲಕ್ಷ ಪರಿಹಾರ ನೀಡಿದೆ. ತಲಾ ₹10 ಸಾವಿರ ಮರಣೋತ್ತರ ಪರಿಹಾರ ನೀಡಿದೆ’ ಎಂದು ಹೇಳಿದ ಅವರು, ಈ ಹಿಂದೆ ಇದ್ದ ‘ಯಶಸ್ವಿನಿ’ ಯೋಜನೆಯನ್ನು ಮುಂದುವರೆಸಬೇಕು’ ಎಂದು ಆಗ್ರಹಿಸಿದರು.

ಬ್ಯಾಂಕ್ ಉಪಾಧ್ಯಕ್ಷ ಬಿ.ಶೇಖರಪ್ಪ, ಸಹಕಾರ ಭಾರತಿ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಎನ್.ಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT