ಬುಧವಾರ, ಅಕ್ಟೋಬರ್ 21, 2020
21 °C

ದಾವಣಗೆರೆ| ಫಾದರ್ ಸ್ಟ್ಯಾನ್ ಸ್ವಾಮಿ ಬಂಧನ: ಖಂಡನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಭೀಮಾ ಕೊರೊಗಾಂವ್‌ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಮಾನವ ಹಕ್ಕುಗಳ ಹೋರಾಟಗಾರ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬಂಧಿಸಿರುವುದನ್ನು ಖಂಡಿಸಿ ಹಾಗೂ ಅವರ ಬಿಡುಗಡೆಗೆ ಆಗ್ರಹಿಸಿ ಜನ ಸಂಘಟನೆಗಳ ಒಕ್ಕೂಟದಿಂದ ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಲಾಯಿತು.

ಫಾದರ್ ಸ್ಟ್ಯಾನ್ ಸ್ವಾಮಿ ಅವರ ಮೇಲೆ ಸುಳ್ಳು ಆರೋಪ ಹೊರಿಸಿ ಬಂಧಿಸಲಾಗಿದೆ. ಮಾನವೀಯತೆಯ ಪರ, ಅಸಹಾಯಕರ ಪರ ಮಾತನಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಸರ್ಕಾರದ ಸಂವಿಧಾನ ವಿರೋಧಿಯಾಗಿದೆ. ಸರ್ಕಾರದ ಕ್ರಮವನ್ನು ಪ್ರಶ್ನಿಸುವವರನ್ನೆಲ್ಲಾ ಬಂಧಿಸಲಾಗುತ್ತಿದೆ. ಇಳಿವಯಸ್ಸಿನ ಫಾದರ್ ಸ್ಟ್ಯಾನ್ ಸ್ವಾಮಿ ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಪ್ರತಿಭಟನಕಾರರು  ಆಗ್ರಹಿಸಿದರು.

ಫಾದರ್ ಎರಿಕ್ ಮತಾಯಸ್, ಫಾದರ್ ರಾಯಪ್ಪ, ಸನ್ನಿ ಗುಡಿನ್ಹೊ, ಪೀಪಲ್ಸ್ ಲಾಯರ್ಸ್ ಗಿಲ್ಡ್‌ನ ಜಿಲ್ಲಾ ಘಟಕದ ಅಧ್ಯಕ್ಷ ಅನಿಸ್ ಪಾಷಾ, ಮಾದಿಗ ದಂಡೋರ ಸಂಘಟನೆಯ ಅಧ್ಯಕ್ಷ ಗುಡ್ಡಪ್ಪ, ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಎಲ್.ಎಚ್. ಅರುಣ್ ಕುಮಾರ್ ಹಾಗೂ ಹಲವು ಸಂಘಟನೆಗಳ ಕಾರ್ಯಕರ್ತರು ಭಾಗವಹಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.