ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾವಣಗೆರೆ: ಶಾಸಕ ರೇಣುಕಾಚಾರ್ಯ ವಿರುದ್ಧ ಎಫ್‌ಐಆರ್‌ ದಾಖಲು

Last Updated 12 ಏಪ್ರಿಲ್ 2020, 15:57 IST
ಅಕ್ಷರ ಗಾತ್ರ

ದಾವಣಗೆರೆ: ವಿವಾದಾತ್ಮಕ ಹೇಳಿಕೆ ನೀಡಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ವಿರುದ್ಧ ಕೆಟಿಜೆ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಚಿಕಿತ್ಸೆಗೆ ಸಹಕರಿಸದ ತಬ್ಲೀಗ್‌ಗಳನ್ನು ಗುಂಡಿಕ್ಕಿ‌ ಕೊಂದರೂ ತಪ್ಪಲ್ಲ’ ಎಂದು ಏಪ್ರಿಲ್ 7ರಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿಯೂ ಆಗಿರುವ ರೇಣುಕಾಚಾರ್ಯ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಕುರಿತು ಕಾಂಗ್ರೆಸ್ ಮುಖಂಡ ಎಂ.ಟಿ. ಸುಭಾಷ್‌ಚಂದ್ರ ದೂರು ನೀಡಿದ್ದರು.

ಐಪಿಸಿ ಸೆಕ್ಷನ್‌ 153 (1), 117, 505 (1)(ಬಿ), 506 ಪ್ರಕಾರ ಎಫ್‌ಐಆರ್‌ ದಾಖಲಿಸಲಾಗಿದೆ. ಅವರು ಹೇಳಿಕೆ ನೀಡಿದ್ದ ಸ್ಥಳ ವ್ಯಾಪ್ತಿಗೆ ಬರುವ ಬಸವಾನಗರ ಪೊಲೀಸ್‌ ಠಾಣೆಗೆ ಪ್ರಕರಣ ವರ್ಗಾಯಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT