ದಾವಣಗೆರೆ: ಇಲ್ಲಿನ ಗಾಂಧಿ ನಗರದ ಮೊಬೈಲ್ ಟವರ್ ಮೇಲೆ ಧ್ವಜ ಕಟ್ಟುವ ವಿಚಾರಕ್ಕೆ ವಾಗ್ವಾದ ನಡೆಸಿದ ಎಂಟು ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಗಾಂಧಿ ನಗರ ಮುಖ್ಯ ರಸ್ತೆಯ ಮೊಬೈಲ್ ಟವರ್ ಮೇಲೆ ಎರಡು ಧ್ವಜಗಳನ್ನು ಕಟ್ಟಲಾಗಿತ್ತು. ಈ ವಿಚಾರವಾಗಿ ಭಾನುವಾರ ಎರಡು ಕೋಮಿನ ಗುಂಪುಗಳ ನಡುವೆ ವಾಗ್ವಾದ ನಡೆದಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು ಧ್ವಜಗಳನ್ನು ತೆರವುಗೊಳಿಸಿದ್ದರು.
‘ವಾಗ್ವಾದಕ್ಕೆ ಕಾರಣವಾಗಿದ್ದ ಧ್ವಜಗಳನ್ನು ತೆರವುಗೊಳಿಸಲಾಗಿದೆ. ಆಜಾದ್ ನಗರ ಠಾಣೆಯಲ್ಲಿ ಎಂಟು ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪರಿಸ್ಥಿತಿ ಶಾಂತವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.