ಸೋಮವಾರ, ಜನವರಿ 20, 2020
20 °C

ಅನಿಲ ಸಿಲಿಂಡರ್‌ ಸೋರಿಕೆಯಿಂದ ಬೇಕರಿಗೆ ಬೆಂಕಿ: ಇಬ್ಬರ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ಸಿಲಿಂಡರ್‌ಗಳಲ್ಲಿ ಅನಿಲ ಸೋರಿಕೆಯಿಂದ ಇಲ್ಲಿನ ಎವಿಕೆ ಕಾಲೇಜು ರಸ್ತೆಯಲ್ಲಿರುವ ‘ಆಹಾರ್ ಕೇಕ್ ಆಫ್ ದಿ ಡೇ’ ಬೇಕರಿಗೆ ಬೆಂಕಿ ಹೊತ್ತಿಕೊಂಡಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದೆ.

ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದ ರವಿಕುಮಾರ್ ಹಾಗೂ ಜಯಮ್ಮ ಅವರ ಸ್ಥಿತಿ ಗಂಭೀರವಾಗಿದ್ದು ರಾಜು, ನಾಗರಾಜು, ಅಮ್ಜದ್‌ಖಾನ್, ರೇಖಾ ಹಾಗೂ ಸರಸಮ್ಮ ಅವರಿಗೆ ಗಾಯಗಳಾಗಿವೆ. ಇವರು ಚಿಗಟೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸಂಜೆ 4.30ರಲ್ಲಿ ಬೇಕರಿ ತಿನಿಸುಗಳನ್ನು ತಯಾರಿಸುವ ಕೋಣೆಯಲ್ಲಿ ಎರಡು ಸಿಲಿಂಡರ್‌ಗಳ ಪೈಪ್‌ನಲ್ಲಿ ಸೋರಿಕೆಯಾಗಿದ್ದು, ಬೆಂಕಿ ಕಾಣಿಸಿಕೊಂಡಿದೆ. ತೀವ್ರ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಬಂದ ಅಗ್ನಿಶಾಮಕ ಅಧಿಕಾರಿಗಳು ಬೆಂಕಿ ನಂದಿಸಿದರು.

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಜಯರಾಮಯ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು