ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಶಾಸಕರ ಒಡೆತನದ ಮದ್ಯ ತಯಾರಿಕಾ ಘಟಕಕ್ಕೆ ಬೆಂಕಿ: ಒಬ್ಬ ಸಾವು

Last Updated 8 ಜನವರಿ 2021, 7:02 IST
ಅಕ್ಷರ ಗಾತ್ರ

ಹರಪನಹಳ್ಳಿ: ತಾಲ್ಲೂಕಿನ ದುಗ್ಗಾವತಿಯಲ್ಲಿರುವ ಮಾಜಿ ಶಾಸಕ ಎಸ್‌.ಎಸ್. ಮಲ್ಲಿಕಾರ್ಜುನ ಅವರ ಒಡೆತನದ ಮದ್ಯ ತಯಾರಿಕಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ. ಮೂವರ ಸ್ಥಿತಿ ಚಿಂತಾಜನಕವಾಗಿದೆ.

ರಘು ಮೃತಪಟ್ಟವರು. ಶಾಮನೂರು ಸಕ್ಕರೆ ಕಾರ್ಖಾನೆ ಆವರಣದಲ್ಲಿರುವ ಜಾನ್ ಡಿಸ್ಟಿಲರೀಸ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಯೂನಿಟ್ ಸ್ಯಾಂಸನ್ ಡಿಸ್ಟಿಲರೀಸ್ ಘಟಕಗಳಲ್ಲಿ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಒಳಗಡೆ ಅನೇಕ ಮಂದಿ ಕೆಲಸ ಮಾಡುತ್ತಿದ್ದರು.

ಬೆಂಕಿಯ ತೀವ್ರತೆ ಹೆಚ್ಚಾಗಿದ್ದು, ಗೋಡೆಗಳು ಕುಸಿಯುತ್ತಿವೆ. ಆಲ್ಕೋಹಾಲ್ ಟ್ಯಾಂಕ್ ವೆಲ್ಡಿಂಗ್ ಮಾಡುವಾಗ ಬೆಂಕಿ ಅವಘಡ ಸಂಭವಿಸಿದೆ. ಮದ್ಯ ತಯಾರಿಕಾ ಘಟಕವಾಗಿದ್ದರಿಂದ ಸಾಕಷ್ಟು ಪ್ರಮಾಣದ ಮದ್ಯದ ಬಾಟೆಲ್‌ಗಳನ್ನು ಗೋದಾಮಿನಲ್ಲಿ ದಾಸ್ತಾನು ಮಾಡಲಾಗಿತ್ತು. ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜು ಮಾಡಲಾಗಿದೆ.

ಹರಪನಹಳ್ಳಿ, ಹರಿಹರ ಮತ್ತು ದಾವಣಗೆರೆಯ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.

ಸ್ಥಳಕ್ಕೆ ತಹಶೀಲ್ದಾರ್ ಎಲ್.ಎಂ.ನಂದೀಶ್ ಬೇಟಿ ನೀಡಿ ಪರಿಶೀಲಿಸಿದರು. ಹಲುವಾಗಲು ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT