ದಾವಣಗೆರೆ: ಇಲ್ಲಿನ ಪಿ.ಬಿ. ರಸ್ತೆಯ ಹಳೆ ಖಾಸಗಿ ಬಸ್ ನಿಲ್ದಾಣದ ಎದುರು ಇರುವ ಭಾಗ್ಯ ಫುಟ್‌ವೇರ್ ಅಂಗಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕೀಟ್‌ನಿಂದಾಗಿ ಬೆಂಕಿ ಬಿದ್ದಿದ್ದು, ಲಕ್ಷಾಂತರ ಮೌಲ್ಯದ ಪಾದರಕ್ಷೆಗಳು ಸುಟ್ಟು ಭಸ್ಮವಾಗಿವೆ.

ನಾಗರಾಜ್ ಎಂಬುವರಿಗೆ ಸೇರಿದ ಮಳಿಗೆ ಇದಾಗಿದ್ದು, ರಾತ್ರಿ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸಿದರು. ಅಲ್ಲದೇ ₹50 ಸಾವಿರದಷ್ಟು ಹಣವನ್ನು ತೆಗೆದುಕೊಟ್ಟರು. ಅಂದಾಜು ₹5 ಲಕ್ಷದಿಂದ ₹ 6ಲಕ್ಷ ಮೌಲ್ಯದ ಪಾದರಕ್ಷೆಗಳು ಬೆಂಕಿಗೆ ಆಹುತಿಯಾಗಿವೆ ಎಂದು ಅಂದಾಜಿಸಲಾಗಿದೆ.

ಗುರುವಾರಷ್ಟೇ ಹೊಸದಾಗಿ ಪಾದರಕ್ಷೆಗಳನ್ನು ತರಿಸಲಾಗಿತ್ತು. ಶಾರ್ಟ್ ಸರ್ಕೀಟ್ ಆದ್ದರಿಂದ ಮೀಟರ್ ಬೋರ್ಡ್‌ಗಳೆಲ್ಲಾ ಸುಟ್ಟುಹೋಗಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸ್ಥಳಕ್ಕೆ ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ಪುಟ್ಟಸ್ವಾಮಿ, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಬಸವಪ್ರಭು ಶರ್ಮ, ಅಗ್ನಿಶಾಮಕ ಠಾಣಾಧಿಕಾರಿ ಅವಿನಾಶ್, ಸಹಾಯಕ ಅಗ್ನಿಶಾಮಕ ಅಧಿಕಾರಿ ಪಕ್ಕೀರಪ್ಪ, ಸಿಬ್ಬಂದಿ ಭೀಮರಾವ್, ಮಹಾಂತೇಶ್, ರಫೀಕ್, ಆಂಜನೇಯ, ನಾಗರಾಜ್, ಚಂದ್ರೇಗೌಡ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.