ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಎಸ್ಸಿ ಮೋರ್ಚಾದ ಮೊದಲ ಕಾರ್ಯಕಾರಿಣಿ 6ಕ್ಕೆ

Last Updated 4 ಜನವರಿ 2021, 2:43 IST
ಅಕ್ಷರ ಗಾತ್ರ

ದಾವಣಗೆರೆ: ಬಿಜೆಪಿ ಪರಿಶಿಷ್ಟ ಜಾತಿ ಮೋರ್ಚಾ ಇದೇ ಮೊದಲ ಬಾರಿಗೆ ಜ.6ರಂದು ರಾಜ್ಯ ಕಾರ್ಯಕಾರಿಣಿ ನಡೆಸುವ ಮೂಲಕ ಅನ್ಯ ಮೋರ್ಚಾಗಳಿಗಿಂತ ಮುಂಚೂಣಿಯಲ್ಲಿದೆ ಎಂದು ಮೋರ್ಚಾದ ಜಿಲ್ಲಾ ಘಟಕದ ಅಧ್ಯಕ್ಷ ಹನುಮಂತ ನಾಯ್ಕ, ಉಪಾಧ್ಯಕ್ಷ ಬಸವರಾಜ ನಾಯ್ಕ ತಿಳಿಸಿದರು.

ಮುಂದೆ ತಾಲ್ಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ಕಾರ್ಯಕಾರಿಣಿಯಲ್ಲಿ ವಿಷಯ ಮಂಡಿಸಲಾಗುವುದು ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಎಸ್ಸಿ ಮೋರ್ಚಾವನ್ನು ಜಿಲ್ಲೆಗಳಲ್ಲಿ ಗಟ್ಟಿ ಮಾಡುವುದರ ಜೊತೆಗೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ವಿಚಾರ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಎಸ್ಸಿ ಮೋರ್ಚಾದ ಶೇ 80ರಷ್ಟು ಜನರು ಆಯ್ಕೆಯಾಗಿದ್ದಾರೆ. ಹೀಗಾಗಿ, ಈ ಸಮುದಾಯ ಪ್ರಗತಿಯ ವಿಚಾರವಾಗಿಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದರು.

ಜ.5ರಂದು ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಅಲ್ಲಿ ಕಾರ್ಯಕಾರಿಣಿಯಲ್ಲಿ ಚರ್ಚಿಸುವ ವಿಚಾರದಲ್ಲಿ ಮಾತುಕತೆ ನಡೆಸಲಾಗುವುದು. ಕಾರ್ಯಕಾರಿಣಿ ಕಾರಣ ನಗರವನ್ನು ಅಲಂಕರಿಸವುದರ ಜೊತೆಗೆ ಮೋರ್ಚಾದಿಂದ ಬೈಕ್ ರ‍್ಯಾಲಿ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಕ್ಕೆ ಎಸ್ಸಿ ಮೋರ್ಚಾದ ಸದಸ್ಯರು ಸ್ವಾಗತಿಸಿದ್ದಾರೆ. ಬಿಜೆಪಿ ಚುನಾವಣಾ ಪ್ರಣಾಳಿಕೆಯಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರುವುದಾಗಿ ಹೇಳಿತ್ತು. ಅದರಂತೆ ನಡೆದುಕೊಂಡಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ಪ್ರೊ. ಎನ್‌. ಲಿಂಗಣ್ಣ, ಎಲ್‌.ಡಿ. ಗೋಣೆಪ್ಪ, ಜಿ.ಬಿ. ಗಂಗಾಧರ್‌, ಅಂಜಿನಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT