ಭಾನುವಾರ, ಆಗಸ್ಟ್ 16, 2020
22 °C
ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದ 20,427 ಮಂದಿ

ಪ್ರಥಮ ಭಾಷೆ ಪರೀಕ್ಷೆ: 1,133 ಗೈರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಎಸ್ಸೆಸ್ಸೆಲ್ಸಿಗೆ ಸಂಬಂಧಿಸಿದಂತೆ ಗುರುವಾರ ನಡೆದ ಪ್ರಥಮ ಭಾಷೆ ಪರೀಕ್ಷೆಗೆ 1,133 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಹೆಸರು ನೋಂದಾಯಿಕೊಂಡ 21,560 ಮಂದಿಯಲ್ಲಿ 20,427 ಜನ ಪರೀಕ್ಷೆಗೆ ಹಾಜರಾಗಿದ್ದಾರೆ.

ಕಂಟೈನ್‌ಮೆಂಟ್‌ ವಲಯದ 85 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅನಾರೋಗ್ಯ ಪೀಡಿತರು ಯಾರೂ ಇರಲಿಲ್ಲ. ಮೊದಲ ಬಾರಿಗೆ 20,015 ಶಾಲಾ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಖಾಸಗಿಯಾಗಿ 453 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಅದರಲ್ಲಿ 94 ಮಂದಿ ಬಂದಿಲ್ಲ. 359 ಮಂದಿ ಹಾಜರಾಗಿದ್ದಾರೆ.

ನೆರೆ ರಾಜ್ಯಗಳಿಂದ ಯಾರೂ ಪರೀಕ್ಷೆ ಬರೆದಿಲ್ಲ. 392 ಮಂದಿ ವಲಸೆ ಬಂದ ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದು, 4 ಮಂದಿ ಗೈರಾಗಿದ್ದಾರೆ. 388 ಮಂದಿ ಪರೀಕ್ಷೆ ಬರೆದಿದ್ದಾರೆ.

ಜಿಲ್ಲೆಯಲ್ಲಿ ಯಾವುದೇ ಗೊಂದಲಗಳು ಉಂಟಾಗಿಲ್ಲ. ಪರೀಕ್ಷೆ ಸರಾಗವಾಗಿ ನಡೆದಿದೆ ಎಂದು ಡಿಡಿಪಿಐ ಸಿ.ಆರ್‌. ಪರಮೇಶ್ವರಪ್ಪ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು