ಸೋಮವಾರ, ಸೆಪ್ಟೆಂಬರ್ 21, 2020
22 °C

ಮಾಧ್ಯಮ ಪ್ರಶಸ್ತಿಗೆ ಐವರ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ದಾವಣಗೆರೆ: ಜಿಲ್ಲಾ ವರದಿಗಾರರ ಕೂಟದಿಂದ ಪ್ರತಿವರ್ಷ ನೀಡಲಾಗುವ ಮಾಧ್ಯಮ ಪ್ರಶಸ್ತಿಗೆ ಐವರನ್ನು ಆಯ್ಕೆ ಮಾಡಲಾಗಿದೆ.

ವಿಜಯ ಕರ್ನಾಟಕದ ಯಳನಾಡು ಮಂಜುನಾಥ, ಸಂಯುಕ್ತ ಕರ್ನಾಟಕದ ಡಿ.ರಂಗನಾಥ ರಾವ್‌, ನ್ಯೂಸ್-18 ವಾಹಿನಿಯ ಎಚ್.ಎಂ.ಪಿ. ಕುಮಾರ್, ಬಿ-ಟಿವಿ ಕ್ಯಾಮೆರಾಮನ್‌ ಲೋಕೇಶ್, ದಾವಣಗೆರೆ ಟೈಮ್ಸ್ ಪತ್ರಿಕೆಯ ವೀರೇಶ್ ಆಯ್ಕೆಯಾಗಿದ್ದಾರೆ.

ವರದಿಗಾರರ ಕೂಟದ ಅಧ್ಯಕ್ಷ ಜಿ.ಎಂ.ಆರ್. ಆರಾಧ್ಯ ಅಧ್ಯಕ್ಷತೆಯ ಸಮಿತಿಯು ಆಯ್ಕೆ ಮಾಡಿದೆ. ಪ್ರಶಸ್ತಿಯು 5 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಪತ್ರಿಕಾ ದಿನಾಚರಣೆ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು