ಸೋಮವಾರ, ಜುಲೈ 26, 2021
27 °C

ಇಸ್ಪೀಟ್ ಆಡುತ್ತಿದ್ದ ಐವರು ಪೊಲೀಸರು ವಶಕ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ದಾವಣಗೆರೆ: ದಾವಣಗೆರೆ ಗ್ರಾಮಾಂತರ ಠಾಣೆ ಆವರಣದ ವಿಶ್ರಾಂತಿ ಕೊಠಡಿಯಲ್ಲಿ ಜೂಜಾಟವಾಡುತ್ತಿದ್ದ ವೇಳೆ ಸೋಮವಾರ ರಾತ್ರಿ ದಾಳಿ ನಡೆಸಿದ ಐಜಿ ಸ್ಕ್ವಾಡ್‌ನ ತಂಡಕ್ಕೆ 5 ಜನ ಕಾನ್‌ಸ್ಟೆಬಲ್‌ಗಳು ಸಿಕ್ಕಿಬಿದ್ದಿದ್ದು, ಅವರಿಂದ ₹29 ಸಾವಿರ ನಗದು ವಶಪಡಿಸಿಕೊಳ್ಳಲಾಗಿದೆ.

ಕಾನ್‌ಸ್ಟೆಬಲ್‌ಗಳಾದ ಲೋಹಿತ್, ನಾಗರಾಜ್, ಮಂಜಪ್ಪ, ಮಹೇಶ್, ಬಾಲರಾಜ್ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪೂರ್ವ ವಲಯ ಐಜಿಪಿ ಆದೇಶದಂತೆ ಡಿವೈಎಸ್ಪಿ ತಿರುಮಲೇಶ್, ಪೊಲೀಸ್ ಇನ್‌ಸ್ಪೆಕ್ಟರ್ ಶಂಕರ್ ಮತ್ತು ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು.
 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು