ಇಂಗ್ಲಿಷ್‌ ಮಾಧ್ಯಮ ಜಾರಿಗೆ ಒತ್ತಾಯ

7

ಇಂಗ್ಲಿಷ್‌ ಮಾಧ್ಯಮ ಜಾರಿಗೆ ಒತ್ತಾಯ

Published:
Updated:
Prajavani

ದಾವಣಗೆರೆ: ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಮಾಧ್ಯಮ ಜಾರಿ ಕುರಿತ ರಾಜ್ಯ ಸರ್ಕಾರದ ನಿಲುವು ಬೆಂಬಲಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು.

ಡಾ.ಬಿ.ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಮಿತಿ ಪದಾಧಿಕಾರಿಗಳು ಮೆರವಣಿಗೆ ಮೂಲಕ ಉಪ ವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಇಂಗ್ಲಿಷ್‌ ಜಾಗತಿಕ ಭಾಷೆ. ಇದನ್ನು ಮನಗಂಡು ಸರ್ಕಾರ ಇಂಗ್ಲಿಷ್‌ ಮಾಧ್ಯಮ ಜಾರಿಗೊಳಿಸಲು ಹೊರಟಿದೆ. ಆದರೆ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವುದು ಸರಿಯಲ್ಲ. ಸರ್ಕಾರದ ನಿರ್ಧಾರದಿಂದ ಬಡವರ, ದಲಿತರ, ಹಿಂದುಳಿದವರ ಹಾಗೂ ಅಲ್ಪಸಂಖ್ಯಾತರಿಗೆ ಅನುಕೂಲವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವುದು ಈ ವರ್ಗಗಳ ಮಕ್ಕಳು. ಯಾರ ಒತ್ತಡಕ್ಕೂ ಮಣಿಯದೆ ಸರ್ಕಾರ ಇಂಗ್ಲಿಷ್‌ ಮಾಧ್ಯಮ ಜಾರಿ ಮಾಡಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.

ಮಗು ಯಾವ ಭಾಷೆ ಕಲಿಯಬೇಕು. ಯಾವುದು ಬೇಡ ಎಂದು ನಿರ್ಧರಿಸುವ ಹಕ್ಕು ಮಗುವಿನ ಪೋಷಕರದ್ದು. ಈ ಭಾಷೆ ಬೇಕು. ಇದು ಬೇಡ ಎಂದು ಸಾಹಿತಿಗಳು, ಬುದ್ಧಿಜೀವಿಗಳು ಹೇಗೆ ನಿರ್ಧರಿಸುತ್ತಾರೆ. ಇಂಗ್ಲಿಷ್‌ ಮಾಧ್ಯಮ ಶಾಲೆಗಳಲ್ಲಿ ಹೆಚ್ಚಾಗಿ ಓದುತ್ತಿರುವುದು ಶ್ರೀಮಂತರ ಮಕ್ಕಳು. ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್‌ ಕಲಿಕೆ ಬೇಡ ಎನ್ನುವ ಮೂಲಕ ಬಡವರ ಹಕ್ಕು ಕಸಿಯಲಾಗುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ಪ್ರೊ.ಸಿ.ಕೆ. ಮಹೇಶ್‌, ಪಿ. ತಿಪ್ಪೇಸ್ವಾಮಿ, ಚಂದ್ರಪ್ಪ, ದುರುಗೇಶ್‌, ಬಿ. ನವೀನ್‌, ಮಹಾಂತೇಶ್‌, ಸುರೇಶ್‌, ಹನುಮಂತಪ್ಪ ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !