ಕರ್ತವ್ಯ ಮರೆತು ಹಕ್ಕು ಕೇಳುವುದು ಹೆಚ್ಚಾಗಿದೆ

ದಾವಣಗೆರೆ: ಸಂವಿಧಾನದ ಅಡಿಯಲ್ಲಿ ಜೀವಿಸುವ ನಾವು ಮೂಲಭೂತ ಹಕ್ಕುಗಳ ಬಗ್ಗೆ ಹೋರಾಟ ಮಾಡುತ್ತವೆ. ಆದರೆ ಅದೇ ಸಂವಿಧಾನ ನೀಡಿರುವ ಕರ್ತವ್ಯಗಳನ್ನು ಮರೆಯುತ್ತೇವೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವಾ ಸದಸ್ಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರವೀಣ್ ನಾಯಕ ಬೇಸರ ವ್ಯಕ್ತಪಡಿಸಿದರು.
ಕಾನೂನು ಸೇವಾ ಪ್ರಾಧಿಕಾರ ಮತ್ತು ದಾವಣಗೆರೆಯ ನ್ಯೂ ಡೆಲ್ಲಿ ಪಬ್ಲಿಕ್ ಶಾಲೆ ಆಶ್ರಯದಲ್ಲಿ ಭಾರತ ಸಂವಿಧಾನ ಸಪ್ತಾಹದ ಅಂಗವಾಗಿ ಶಾಲೆಯಲ್ಲಿ ನಡೆದ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಪೋಕ್ಸೊ ಪ್ರಕರಣ ಎಂದರೆ ಕೇವಲ ಬಾಲಕಿಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯಗಳಷ್ಟೇ ಅಲ್ಲ. 18 ವರ್ಷದೊಳಗಿನ ಬಾಲಕರ ಮೇಲೆ ನಡೆಯುವ ಪ್ರಕರಣಗಳೂ ಸೇರುತ್ತವೆ. ಈ ಕುರಿತು ಪ್ರಾಧಿಕಾರದಿಂದ ಕಾನೂನು ನೆರವು ನೀಡಲಾಗುತ್ತದೆ. ಮಕ್ಕಳ ಸ್ನೇಹಿ ನ್ಯಾಯಾಲಯ ರೂಪಿಸಲಾಗಿದ್ದು, ಗುಪ್ತ ವಿಚಾರಣೆ ನಡೆಸಲಾಗುತ್ತದೆ. ಮಕ್ಕಳು ಯಾವುದೇ ರೀತಿಯ ದೌರ್ಜನ್ಯಕ್ಕೆ ಒಳಗಾದಲ್ಲಿ ಭಯಮುಕ್ತವಾಗಿ ನ್ಯಾಯಾಲಯ ಇಲ್ಲವೇ ಪೊಲೀಸ್ ಠಾಣೆಗೆ ದೂರು ಅಥವಾ ಹೇಳಿಕೆ ನೀಡಬೇಕು ಎಂದು ಕಿವಿಮಾತು ಹೇಳಿದರು.
ಸಂವಿಧಾನ ದಿನಾಚರಣೆ ಅಂಗವಾಗಿ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆ ಹಮ್ಮಿಕೊಂಡಿದ್ದು ಶ್ಲಾಘನೀಯ ಎಂದು ವಕೀಲ ಎಲ್.ಎಚ್. ಅರುಣ್ ಕುಮಾರ್ ತಿಳಿಸಿದರು. ಮುಖ್ಯ ಶಿಕ್ಷಕಿ ಬಿ.ಎಸ್. ಪೂರ್ಣಿಮಾ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಅಂಬಣ್ಣ, ಶಿಕ್ಷಣ ಸಂಯೋಜಕ ಡಿ.ನಾಗರಾಜ್, ಸಂಪನ್ಮೂಲ ವ್ಯಕ್ತಿ ಕೆ.ಜಿ. ರವಿಕುಮಾರ್, ಕಾರ್ಯದರ್ಶಿ ಸಂತೋಷ್ ಕುಮಾರ್, ಸಹನಾ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.