ಶನಿವಾರ, ಸೆಪ್ಟೆಂಬರ್ 18, 2021
24 °C

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ: ರೇಣುಕಾಚಾರ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊನ್ನಾಳಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪಕ್ಷದಲ್ಲಿ ಕಡೆಗಣಿಸಲಾಗಿದೆ ಎಂಬುದು ಸುಳ್ಳು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಹೊನ್ನಾಳಿ ತಾಲ್ಲೂಕಿನಲ್ಲಿ ಹಮ್ಮಿಕೊಂಡಿದ್ದ ಲಸಿಕಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಕೋವಿಡ್ ಸಂದರ್ಭದಲ್ಲಿ ಅವರು ತೆಗದುಕೊಂಡ ತೀರ್ಮಾನಗಳ ಬಗ್ಗೆ ರಾಷ್ಟ್ರೀಯ ನಾಯಕರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯಾರು ಮುಖ್ಯಮಂತ್ರಿ ಇರುತ್ತಾರೊ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಲಾಗುವುದು. ಅದೇ ಅರ್ಥದಲ್ಲಿ ಅಮಿತ್ ಶಾ ಅವರೂ ಮಾತನಾಡಿದ್ದಾರೆ. ಅದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ ಎಂದರು.

ಮಾಜಿ ಸಚಿವ ಎಂ.ಬಿ. ಪಾಟೀಲ ಅವರು ವೀರಶೈವ ಲಿಂಗಾಯತ ಧರ್ಮ ಒಡೆಯಲು ಹೋಗಿ, ಅದರಲ್ಲಿ ವಿಫಲರಾಗಿದ್ದರು. ಈಗ ಮತ್ತೊಮ್ಮೆ ಅದಕ್ಕೆ ಕೈ ಹಾಕಿದ್ದು ಜನರು ತಕ್ಕ ಉತ್ತರ ನೀಡುತ್ತಾರೆ ಎಂದರು.

ಹೊನ್ನಾಳಿ-ನ್ಯಾಮತಿ ಅವಳಿ ತಾಲ್ಲೂಕು ಲಸಿಕೆ ನೀಡುವ ವಿಚಾರದಲ್ಲಿ ಜಿಲ್ಲೆಯಲ್ಲಿಯೇ ಪ್ರಥಮ ಸ್ಥಾನದಲ್ಲಿದೆ. ಇದುವರೆಗೂ ಅವಳಿ ತಾಲೂಕಿನಾದ್ಯಂತ 1,38,528 ಜನರಿಗೆ ಲಸಿಕೆ ಹಾಕಲಾಗಿದೆ. 45 ವರ್ಷ ಮೇಲಿನ ಶೇಕಡ 98ರಷ್ಟು ಜನರಿಗೆ ಲಸಿಕೆ ಹಾಕಲಾಗಿದೆ. 18 ವರ್ಷ ಮೇಲಿನ ಶೇ 48 ಜನರಿಗೆ ಲಸಿಕೆ ಹಾಕಲಾಗಿದೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು